ಮೇಕೆದಾಟು ಯೋಜನೆಯನ್ನು ಪುನರ್ ಆರಂಭಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಪಕ್ಷಾತೀತವಾಗಿ ಪಾದಯಾತ್ರೆ,

ಮೈಸೂರು:೧೯-ಸ್ಥಗಿತಗೊಂಡಿರುವ ಮೇಕೆದಾಟು ಯೋಜನೆಯನ್ನು ಪುನರ್ ಆರಂಭಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಪಕ್ಷಾತೀತವಾಗಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ವಿಧಾನಪರಿಷತ್ ಮಾಜಿ ಉಪಸಭಾಪತಿ ಸುದರ್ಶನ್ ಇಂದಿಲ್ಲಿ ತಿಳಿಸಿದರು.


ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನದಿ ನೀರಾವರಿ ಕುರಿತು ಅನೇಕ ವರ್ಷಗಳಿಂದ ಹಲವಾರು ಸಂಘ-ಸಂಸ್ಥೆಗಳಿಂದ ಹೋರಾಟಗಳು ನಡೆಯುತ್ತಲೇ ಬರುತ್ತಿವೆ. ಸುಮಾರು ಹತ್ತು ಜಿಲ್ಲೆಗಳಿಗೆ ಅನುಕೂಲವಾಗುವ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಕಾಲಹರಣ ಮಾಡುತ್ತಿದ್ದಾರೆ.


ಆದ್ದರಿಂದ ಜ.೯ ರಿಂದ ಮೇಕೆದಾಟು ಯೋಜನೆ ಪೂರ್ಣಗೊಳಿಸುವಂತೆ ಒತ್ತಾಯಿಸಿ ೧೦ ದಿನಗಳ ಪಾದಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಸಲಾಗಿದ್ದು, ಪಾದಯಾತ್ರೆಯ ರೂಪುರೇಷೆಗಳ ಕುರಿತು ಕೆಪಿಸಿಸಿ ಅಧ್ಯಕ್ಷರು ಡಿ.೨೪ರಂದು ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.ಕೆಪಿಸಿಸಿ ವಕ್ತಾರ ಎಂ.ಲಕ್ಷö್ಮಣ್, ನಗರಾಧ್ಯಕ್ಷ ಆರ್.ಮೂರ್ತಿ ಮತ್ತಿತರರಿದ್ದರು.