ಮೈಸೂರು: ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ದೇವರಾಜ ಅರಸು ಕಾಲೋನಿಯಲ್ಲಿ(ವಿಶ್ವೇಶ್ವರನಗರ)  ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಶಂಕುಸ್ಥಾಪನೆ ನೆರವೇರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಜೂರಾಗಿರುವ ಒಂದು ಕೋಟಿ ರೂ.ವೆಚ್ಚದ ಕಾಮಗಾರಿಯನ್ನು ಕರ್ನಾಟಕ ಗ್ರಾಮೀಣಮೂಲಸೌಕರ್ಯ ಅಭಿವೃದ್ಧಿ ನಿಗಮ(ಕೆಆರ್‌ಐಡಿಎಲ್) ವಹಿಸಿಕೊಂಡಿದ್ದು, ಬುಧವಾರ ಶಾಸಕ ಟಿ.ಎಸ್.ಶ್ರೀವತ್ಸ ಶಂಕುಸ್ಥಾಪನೆ  ನೆರವೇರಿಸಿ ಗುದ್ದಲಿಪೂಜೆ ಮಾಡಿದರು. ಬಳಿಕ ಮಾತನಾಡಿದ ಶಾಸಕರು,  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಮಂಜೂರಾಗಿದ್ದು, ಇದನ್ನು ಕೆಆರ್‌ಐಡಿಎಲ್ ವತಿಯಿಂದ ನಿರ್ಮಾಣ ಮಾಡಲಾಗುತ್ತದೆ.

ಕಾಮಗಾರಿಯು ಗುಣಮಟ್ಟದಿಂದ ಕೂಡಿಸಲು ಸರ್ಕಾರಿ ಸ್ವಾಮ್ಯದ ಸಂಸ್ಥೆಗೆ ವಹಿಸಲಾಗಿದೆ ಎಂದರು. ದೇವರಾಜ ಅರಸು ಕಾಲೋನಿಯಲ್ಲಿ ದಲಿತರು,ಪೌರ ಕಾರ್ಮಿಕ ಸಮುದಾಯದ ಜನರು ಹೆಚ್ಚಾಗಿ ವಾಸಮಾಡುತ್ತಿದ್ದಾರೆ. ಶುಭ ಸಮಾರಂಭಗಳನ್ನು ಏರ್ಪಡಿಸಲು ಸಮುದಾಯ ಭವನದ ಅಗತ್ಯವಿದೆ ಎನ್ನುವ ಮನವಿಯನ್ನು ಪರಿಗಣಿಸಿ ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡ ನಿರ್ಮಾಣಗೊಂಡ ಬಳಿಕ ಸಾರ್ವಜನಿಕರು ಬಳಸಬೇಕು ಎಂದು ಸಲಹೆ ನೀಡಿದರು. ಕೆಆರ್‌ಇಡಿಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರ ಅರ್ಚನ, ಸಹಾಯಕ ಅಭಿಯಂತರ ವಿವೇಕ್, ನಗರಪಾಲಿಕೆ ಮಾಜಿ ಸದಸ್ಯೆ ಶಾಂತಮ್ಮ ವಡಿವೇಲು, ಕೆಆರ್ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯರಾಮು, ಆದಿದ್ರಾವಿಡ ಮಹಾಸಭಾದ ಮುಖಂಡರಾದ ಎನ್.ಮಾರ, ಶ್ರೀನಿವಾಸ್, ವಿಜಯ,ು ಮಂಜಯ್ಯ,ಮಹದೇವು, ನಾಗರಾಜು, ಯೋಗಾನಂದ,ಪಳನಿಸ್ವಾಮಿ ಮತ್ತಿತರ ಮುಖಂಡರು ಹಾಜರಿದ್ದರು.

ಮೈಸೂರಿನ ದೇವರಾಜ ಅರಸು ಕಾಲೋನಿಯಲ್ಲಿ(ವಿಶ್ವೇಶ್ವರನಗರ)  ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಶಂಕುಸ್ಥಾಪನೆ ನೆರವೇರಿಸಿದರು. ಕೆಆರ್‌ಐಡಿಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರ ಅರ್ಚನ, ಸಹಾಯಕ ಅಭಿಯಂತರ ವಿವೇಕ್, ನಗರಪಾಲಿಕೆ ಮಾಜಿ ಸದಸ್ಯೆ ಶಾಂತಮ್ಮ ವಡಿವೇಲು, ಕೆಆರ್ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯರಾಮು ಮತ್ತಿತರರು ಹಾಜರಿದ್ದರು.

One attachment • Scanned by Gmail