ಗುಂಡ್ಲುಪೇಟೆ: ಕೇಂದ್ರ ಮತ್ತು ರಾಜ್ಯದ ರೈತ ಪರವಾದ ಕಾರ್ಯಕ್ರಮಗಳಿಂದ ಆಗುವ ಅನುಕೂಲಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಎಪಿಎಂಸಿ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.
ಎಪಿಎಂಸಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಬೇಗೂರು, ಕುಂದಕೆರೆ ಹಾಗೂ ತೆರಕಣಾಂಬಿ ಕ್ಷೇತ್ರಗಳಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕೇಂದ್ರದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಮೂರು ಕಂತುಗಳಲ್ಲಿ 6 ಸಾವಿರ, ರಾಜ್ಯ ಸರ್ಕಾರ ಎರಡು ಕಂತುಗಳಲ್ಲಿ 4 ಸಾವಿರ ಸಿಗುತ್ತಿದೆ. ಹೈನುಗಾರಿಕೆ ಮಹತ್ವ ಅರಿತು ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಲಿಗೆ ಪೆÇ್ರೀತ್ಸಾಹಧನ ಕೊಡುವ ವ್ಯವಸ್ಥೆ ಮಾಡಿದರು. ಬೊಮ್ಮಾಯಿಯವರು ರೈತರ ಮಕ್ಕಳಿಗೆ ಸ್ಥಾಲರ್‍ಶಿಪ್ ಯೋಜನೆ ಜಾರಿಗೊಳಿಸಿದರು ಎಂದು ತಿಳಿಸಿದರು.
ತಾಲೂಕಿನ ಬೇಗೂರಿನಲ್ಲಿ ಹತ್ತಿ ಮಾರುಕಟ್ಟೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಪಟ್ಟಣ ಮತ್ತು ತೆರಕಣಾಂಬಿಯ ಎಪಿಎಂಸಿ ಅಭಿವೃದ್ಧಿಗೆ ಒಂದು ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ರೈತರ ಬಹುದಿನದ ಬೇಡಿಕೆಯಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಆದ್ದರಿಂದ ಕಾರ್ಯಕರ್ತರು ಈ ಎಲ್ಲ ಕಾರ್ಯಕ್ರಮಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಡಿ.ಪಿ.ಜಗದೀಶ್, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎನ್.ಮಲ್ಲೇಶ್, ಜಿಪಂ ಮಾಜಿ ಅಧ್ಯಕ್ಷೆ ಶೈಲಜಾ ಮಲ್ಲೇಶ್, ಮಾಜಿ ತಾಪಂ ಅಧ್ಯಕ್ಷ ಆರ್.ಮಹೇಶ್, ರೈತ ಮೋರ್ಚ ಜಿಲ್ಲಾಧ್ಯಕ್ಷ ಎಸ್.ಎಂ.ಮಲ್ಲಿಕಾರ್ಜುನ, ತಾ.ಪಂ ಮಾಜಿ ಅಧ್ಯಕ್ಷ ಆರ್.ಮಹೇಶ್, ಎಪಿಎಂಸಿ ಮಾಜಿ ನಿರ್ದೇಶಕ ಕಿಲಗೆರೆ ಸುಜೀಂದ್ರ, ರವಿ ಬುದ್ಧಿ, ಲಕ್ಕೂರು ಶಿವಸ್ವಾಮಿ, ಶಿವನಾಗ, ಗೋವಿಂದ, ಪ್ರಶಾಂತ್, ಸುನಿಲ್ ರಾಜು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
ವರದಿ: ಬಸವರಾಜು ಎಸ್.ಹಂಗಳ