ಪಾಂಡವಪುರ : ಕೊರೊನಾ ಮಹಾಮಾರಿಗೆ ಪಟ್ಟಣದ ಹಾರೋಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ.
ಗ್ರಾಮದ ದಿವಂಗತ ಯಜಮಾನ್ ಸಿದ್ದೇಗೌಡ ಪುತ್ರ ಶಿವಕುಮಾರ್ ಅಲಿಯಾಸ್ ಅಂಗಡಿ ಬಾಬು (40) ಮೃತ ವ್ಯಕ್ತಿ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರರನ್ನು ಆಗಲಿದ್ದಾರೆ.
ಕಳೆದ ಒಂದು ವಾರದಿಂದ ಕೋವಿಡ್ ಲಕ್ಷಣಗಳಿಂದ ಬಳಲುತ್ತಿದ್ದನಾದರೂ ಆಸ್ಪತ್ರೆಗೆ ತೆರಳದೇ ಮನೆಯಲ್ಲಿಯೇ ಔಷಧಿ, ಮಾತ್ರೆ ಸೇವನೆ ಮಾಡುತ್ತಿದ್ದ ಎನ್ನಲಾಗಿದೆ. ಬಳಿಕ ಪೆರಲಿಸಿಸ್‌ಗೆ ಒಳಗಾಗಿ ಸುಸ್ತು ಉಂಟಾದ ಹಿನ್ನೆಲೆಯಲ್ಲಿ ಪಟ್ಟಣದ ಖಾಸಗಿ ಆಸ್ಪತ್ರೆ ಹಾಗೂ ಉಪವಿಭಾಗೀಯ ಆಸ್ಪತ್ರೆಗೆ ತೆರಳಿದ್ದ. ಅಲ್ಲಿ ಚಿಕಿತ್ಸೆ ದೊರಕದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್,ಆಸ್ಪತ್ರೆಯಲ್ಲಿ ದಾಖಲಾಗಿದ್ದ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಗ್ರಾಮದ ಹೊರವಲಯದಲ್ಲಿ ಕೋವಿಡ್ ನಿಯಾಮವಳಿ ಪ್ರಕಾರ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಹಾರೋಹಳ್ಳಿ ಗ್ರಾಮದಲ್ಲಿ ಅಂಗಡಿ ಬಾಬು ಸೇರಿದಂತೆ ಇಬ್ಬರು ಯುವಕರು ಕೋವಿಡ್‌ಗೆ ಬಲಿಯಾದ ಹಿನ್ನೆಲೆಯಲ್ಲಿ ಸ್ಥಳೀಯ ಪುರಸಭೆ ವಿತಿಯಿಂದ ಇಡೀ ಗ್ರಾಮವನ್ನು ಸ್ಯಾನಿಟೈಸ್ ಮಾಡಲಾಯಿತು.

 

 

By admin