ಮೈಸೂರು:  ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಫ್ರಂಟ್‌ಲೈನ್ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸಿದ ಶ್ರೀನಿವಾಸ ರಮೇಶ್ ಅವರನ್ನು ಸುತ್ತೂರು ಪೀಠಾಧಿಪತಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಅಭಿನಂದಿಸಿ, ಪ್ರಮಾಣ ಪತ್ರ ವಿತರಿಸಿದರು.

ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿದ ಶ್ರೀನಿವಾಸ ರಮೇಶ್, ನಾನು ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಳೆದೆರಡು ತಿಂಗಳುಗಳಿಂದ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸಿದ್ದೇನೆ. ಅದರ ಜೊತೆಗೆ ತುಳಸೀದಾಸ ಮೋಹನದಾಸ ಆಸ್ಪತ್ರೆಯಲ್ಲಿಯೂ ರೆಡ್ ಜ಼ೋನ್‌ನಲ್ಲಿ ಸೇವೆ ಸಲ್ಲಿಸಿದ್ದೇನೆ. ಸಾಮಾನ್ಯವಾಗಿ ಕೊರೊನಾ ಪಾಸಿಟಿವ್ ರೋಗಿಗಳು ಇರುವ ರೆಡ್ ಜ಼ೋನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಜನರು ಹಿಂಜರಿಯುತ್ತಾರೆ. ಆದರೆ ನಾನು ಪಿಪಿ ಕಿಟ್ ಹಾಕಿಕೊಂಡು ರೋಗಿಗಳ ಕೊಠಡಿಗಳಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಕೇಳುತ್ತಿದ್ದೆ ಎಂದರು.

ಒಮ್ಮೊಮ್ಮೆ ಆಂಬ್ಯುಲೆನ್ಸ್‌ನಲ್ಲಿ ರೋಗಿಗಳನ್ನು ಕರೆದೊಯ್ಯುವಾಗ ನಾನು ಅವರ ಜೊತೆ ತೆರಳುತ್ತಿದ್ದೆ ಎಂದು ವಿವರಿಸಿದರು.

By admin