ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ಉಸ್ತುವಾರಿಯಲ್ಲಿ ಜೆ.ಎಲ್.ಬಿ. ರಸ್ತೆಯ ತುಳಸಿದಾಸ್ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗುತ್ತಿದ್ದು, ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ಅವರು ಭಾನುವಾರ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪನಾಗ್, ಪಾಲಿಕೆ ಆರೋಗ್ಯ ಅಧಿಕಾರಿ ಡಾ. ನಾಗರಾಜು, ಜಿಲ್ಲಾ ಕ್ಷಯಾ ರೋಗ ನಿಯಂತ್ರಣಾಧಿಕಾರಿ ಡಾ. ಸಿರಾಜ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.