ರಾಜ್ಯ ಬಿಜೆಪಿ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಇಂದು ಮೈಸೂರು ನಗರ ಜಿಲ್ಲಾ ಯುವಮೋರ್ಚಾ ವತಿಯಿಂದ ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ನಿಷೇಧ ಕಾನೂನನ್ನು ಸ್ವಾಗತಿಸಿ ಸಂಭ್ರಮಾಚರಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಯುವಮೋರ್ಚಾ ಅಧ್ಯಕ್ಷ ಕಿರಣ್ ಗೌಡ ಗೋವುಗಳಿಗೆ ಪೂಜೆಸಲ್ಲಿಸುವ ಮೂಲಕ ಚಾಲನೆ ನೀಡಿದರು. ಸುಮಾರು 50 ವರ್ಷಗಳ ಕಾಲ ಆಳಿದಂತಹ ಸರ್ಕಾರಗಳು ಮತ ಬ್ಯಾಂಕ್ ಗೋಸ್ಕರ ಈ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿರಲಿಲ್ಲ ಇಂದು ರಾಜ್ಯ ಬಿಜೆಪಿ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದೆ ಎಂದು ಮೈಸೂರು ನಗರ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಕಿರಣ್ ಗೌಡ ರವರು ತಿಳಿಸಿದರು.

By admin