ಮೈಸೂರು: ಪತ್ರಕರ್ತರು ಹಾಗೂ ಪೊಲೀಸರ ನಡುವೆ ನಡೆದ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ, ಅತ್ಯುತ್ತಮ ಪ್ರದರ್ಶನ ನೀಡಿದ ಪೊಲೀಸರ ತಂಡ ಭರ್ಜರಿ ಗೆಲುವು ಸಾಧಿಸಿತು.
ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಪೊಲೀಸ್ ಫೈರ್ ರೇಂಜ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ನಗರ ಪೊಲೀಸ್ ಆಯುಕ್ತರ ತಂಡ, ನಿಗದಿತ 10 ಓವರ್‌ಗಳಲ್ಲಿ 82 ರನ್‌ಗಳಿಸಿತು. ಈ ಸವಾಲು ಬೆನ್ನತ್ತಿದ ಜಿಲ್ಲಾ ಪತ್ರಕರ್ತರ ಸಂಘ 10 ಓವರ್‌ಗಳಲ್ಲಿ 49 ರನ್‌ಗಳಿಗೆ ಆಲೌಟ್ ಆಯಿತು. ಆ ಮೂಲಕ ಪೊಲೀಸ್ ಆಯುಕ್ತ ತಂಡ 33 ರನ್‌ಗಳ ಗೆಲುವು ಸಾಧಿಸಿತು.
ನಂತರ ನಡೆದ ಬಹುಮಾನ ವಿತರಣೆ ಸಮಾರಂಭದಲ್ಲಿ ಡಿಸಿಪಿ ಡಾ.ಎ.ಎನ್. ಪ್ರಕಾಶ್ ಗೌಡ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಹಾಗೂ ಇತರೆ ಗಣ್ಯರು ಉಭಯ ತಂಡಗಳಿಗೆ ಬಹುಮಾನ ನೀಡಿದರು.