ಕೊಳ್ಳೇಗಾಲ: ವೃದ್ಧೆಯೊಬ್ಬರು ತಮ್ಮ ಕತ್ತನ್ನು ತಾವೇ ಕೊಯ್ದುಕೊಂಡು ಭೀಕರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲ್ಲೂಕಿನ ಕೌದಳ್ಳಿ ಸಮೀಪದ ಲಕ್ಷಣ ದೊಡ್ಡಿಯಲ್ಲಿ ನಡೆದಿದೆ.
ಲಕ್ಷಣ ದೊಡ್ಡಿಯ ಪಾಪಚ್ಚಿ ಎಂಬುವರೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ವೃದ್ಧೆ ಪಾಪಚ್ಚಿ ಹಲವು ಸಮಯಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗಿದ್ದು, ಆರೋಗ್ಯ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ನೊಂದು ಮನೆಯಲ್ಲಿದ್ದ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಳೆ. ಇದನ್ನು ಕಂಡ ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾಳೆ. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತ ದೇಹ ಇರಿಸಲಾಗಿದೆ.