ಸಾಲಬಾಧೆಯಿಂದ ಬೇಸತ್ತು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಗುಂಡ್ಲುಪೇಟೆ: ಸಾಲಬಾಧೆಯಿಂದ ಬೇಸತ್ತು ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿವಪುರ ಕಲ್ಲುಕಟ್ಟೆ ಜಲಾಶಯದಲ್ಲಿ ಮಂಗಳವಾರ ನಡೆದಿದೆ.
ವಡ್ಡನಹೊಸಹಳ್ಳಿ ಗ್ರಾಮದ ಸಿದ್ದರಾಜು(42) ಮೃತ ವ್ಯಕ್ತಿಯಾಗಿದ್ದು, ಈತ ಪ್ಲೇ ವುಡ್ ಅಂಗಡಿ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದ್ದು, ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಸಾಲಗಾರರ ಕಿರುಕುಳ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಹಿತಿ ಅರಿತ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮೃತ ಸಿದ್ದರಾಜು ಚಪ್ಪಲಿ ಹಾಗೂ ಬೈಕ್ ಕೆರೆ ಏರಿ ಮೇಲೆ ನಿಲ್ಲಿಸಿರುವುದು ಕಂಡು ಬಂದಿದೆ. ನಂತರ ಅಗ್ನಿ ಶಾಮದ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ದೌಡಾಯಿಸಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಶವವನ್ನು ಮೇಲೆತ್ತುವ ಕೆಲಸ ಮಾಡಿದ್ದಾರೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹ ರವಾನಿಸಲಾಗಿದ್ದು, ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.