ಯಳಂದೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್  ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಪೆಟ್ಟಾಗಿ ಸಾವನ್ನಪ್ಪಿದ ಘಟನೆ ಸಮೀಪದ ಮಸಣಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕುಮಾರ್ (40) ಮೃತಪಟ್ಟ ದುರ್ದೈವಿ.

ಚಾಮರಾಜನಗರ ತಾಲೂಕಿನ ಪುಟ್ಟನಪುರ ಗ್ರಾಮದ ನಿವಾಸಿ ನವೀನ್ (35) ಎಂಬಾತ ಮದ್ದೂರು ತಾಲೂಕು ಕೆ.ಎಂ.ದೊಡ್ಡಿ ಗ್ರಾಮದಿಂದ ಗಾರೆಕೆಲಸ ಮುಗಿಸಿಕೊಂಡು ವಾಪಸ್ಸು ಸ್ವಗ್ರಾಮ ಪುಟ್ಟನಪುರಕ್ಕೆ ತೆರಳುತ್ತಿದ್ದಾಗ ಮಸಣಾಪುರದ ಬಳಿ ರಸ್ತೆ ದಾಟುತ್ತಿದ್ದ ಕುಮಾರ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ತಲೆಗೆ ತೀವ್ರ ಸ್ವರೂಪದ ಪೆಟ್ಟಾದ ಪರಿಣಾಮ ತೀವ್ರರಕ್ತಸ್ರಾವವಾಗಿ ಸ್ಥಳದ ಮೃತಪಟ್ಟಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ರಾಮಸಮುದ್ರ  ಪೂರ್ವ ಪೊಲೀಸ್ ಠಾಣೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಮಹಜರು ನಡೆಸಿ, ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

By admin