ಪಿರಿಯಾಪಟ್ಟಣ: ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ ವಿವರಗಳ ತಿದ್ದುಪಡಿ, ಹೆಸರು ಬದಲಾವಣೆ ಮತ್ತು ಮೊಬೈಲ್ ಸಂಖ್ಯೆಯ ವಿವರ, ಆಕ್ಷೇಪಣೆ ದಾಖಲಿಸಲು ಅವಕಾಶ ಕಲ್ಪಿಸಲಾಗಿದ್ದು ಈ ಅವಕಾಶವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ವೈ‌.ಪ್ರಸಾದ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ತಿಳಿಸಿರುವ ಅವರು ಇತ್ತೀಚೆಗೆ ಕೃಷಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಮತ್ತು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಭೆಯಲ್ಲಿ ಪೂರ್ವ ಮುಂಗಾರು ಮಳೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಅನೇಕ ಭಾಗಗಳಲ್ಲಿ ರೈತರು ತಾವು ಬೆಳೆದ ಮುಂಗಾರು ಮಳೆಯಲ್ಲಿ ಬಿತ್ತಿದ ಬೆಳೆಗಳನ್ನು ನಾಶಪಡಿಸಿ ಮತ್ತೆ ಬೇರೆಬೇರೆ ಬೆಳೆಗಳನ್ನು ಬಿತ್ತನೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಯ ಬೆಳೆಯ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಈ ಹಿಂದೆ ಬೆಳೆದಿದ್ದ ಬೆಳೆಗಳ ವಿವರವನ್ನು ಅಪ್ಲೋಡ್ ಮಾಡಿದ್ದರು ಆದರೆ ಈಗ ಬೇರೆ ಬೆಳೆಗಳನ್ನು ಬಿತ್ತಿರುವ ಕಾರಣ ಪ್ರಸ್ತುತ ಬೆಳೆಗಳ ಮಾಹಿತಿಯನ್ನು ಅಪ್ಲೋಡ್ ಮಾಡಲು ಹಾಗೂ ಬೆಳೆಯ ವಿವರ , ಹೆಸರು ತಿದ್ದುಪಡಿ ಮಾಡಲು ರೈತರಿಗೆ ಮತ್ತೊಂದು ಅವಕಾಶವನ್ನು ನೀಡಿಲಾಗಿದ್ದು, ಒಂದು ವೇಳೆ ಈ ಹಿಂದೆ ಮಾಹಿತಿ ತಪ್ಪಾಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು. ಈ ಬಗ್ಗೆ ನಮ್ಮ ಮೇಲ್ವಿಚಾರಕರು ಸೂಕ್ತ ಬೆಳೆಗಳನ್ನು ದಾಖಲಿಸಿ ರೈತರ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುತ್ತಾರೆ. ನಿಮ್ಮ ಬೆಳೆ ಸಮೀಕ್ಷೆಯಲ್ಲಿ ಎಲ್ಲಾ ಸರ್ವೆ ನಂಬರ್, ಮಾಹಿತಿ ಹಾಗೂ ಫೋಟೋ ಸರಿಯಾಗಿ ಅಪ್ಲೋಡ್ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಿವಂತೆ ಸೂಚನೆ ನೀಡಿದ್ದು ಈ ಮಾಹಿತಿಯು ಪಹಣಿಯಲ್ಲಿ ಬೆಳೆ ವಿವರ ದಾಖಲಿಸುವಲ್ಲಿ, ಸರ್ಕಾರದಿಂದ ನೀಡಲಾಗುವ ಅತಿವೃಷ್ಟಿ ಮತ್ತು ಅನಾವೃಷ್ಟಿಯ ಪರಿಹಾರಕ್ಕಾಗಿ, ಬೆಂಬಲ ಬೆಲೆ, ಖರೀದಿ ಕೇಂದ್ರಗಳಲ್ಲಿ ರೈತರ ಬೆಳೆ ಖರೀದಿಸಲು ಬೆಳೆ ವಿಮೆ ನೋಂದಣಿ ಮತ್ತು ಪಾವತಿ ಮಾಡಲು, ಮುಂದಿನ ದಿನಗಳಲ್ಲಿ ಬ್ಯಾಂಕಿನಿಂದ ನೀಡುವ ಬೆಳೆ ಸಾಲ ಪಡೆಯಲು ಈ ಬೆಳೆ ಸಮೀಕ್ಷೆ ಮಾಹಿತಿ ಉಪಯೋಗಕ್ಕೆ ಬರಲಿದ್ದು
ರೈತರು, ತಮ್ಮ ಮೊಬೈಲ್‌ ಬಳಸಿ, ತಾವೇ ಬೆಳೆ ಮಾಹಿತಿ ದಾಖಲಿಸುವುದರಿಂದ ಮಾಹಿತಿ ನಿಖರವಾಗಿರುತ್ತದೆ. ಇದರಿಂದ ತಪ್ಪುಗಳು ಆಗುವ ಸಾಧ್ಯತೆ ಇರುವುದಿಲ್ಲ. ಸರ್ವೇ ನಂಬರ್ ಹಿಸ್ಸಾವಾರು ಬೆಳೆ ಸರಿಯಾಗಿ ದಾಖಲಾಗುತ್ತದೆ. ವಿವಿಧ ಯೋಜನೆಗಳಿಗೆ ಸರ್ಕಾರದಿಂದ ಬೆಳೆ ಸಮೀಕ್ಷೆ ಮಾಹಿತಿ ಬಳಸುತ್ತಿರುವುದರಿಂದ ರೈತರಿಗೆ ಅಲೆದಾಟ ತಪ್ಪುತ್ತದೆ. ಬೆಳೆ ವಿಮೆ, ಇನ್‌ಪುಟ್ ಸಬ್ಸಿಡಿ, ಬೆಳೆಸಾಲ ಹಾಗೂ ಕೀಟರೋಗಕ್ಕೆ ಒಳಗಾದ ಬೆಳೆಗೆ ಸರ್ಕಾರದಿಂದ ಪರಿಹಾರ ಧನ ಸಹಾಯ ನೀಡಲು ಬೆಳೆ ಸಮೀಕ್ಷೆ ಮಾಹಿತಿ ಬಳಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ರೈತರು ಖುದ್ದಾಗಿ ದಾಖಲಿಸಬಹುದು ಆದ್ದರಿಂದ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಕಂದಾಯ/ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆ ಅಧಿಕಾರ ಗಳನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.