ವರದಿ: ಸಿ.ಎಸ್.ನಾಗರಾಜ್ ಉಪ್ಪಾರ್
ಚಾಮರಾಜನಗರ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿAದು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.
ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್‌ಕುಮಾರ್, ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸ್‌ಪ್ರಸಾದ್, ಶಾಸಕರು ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸಿ. ಎಸ್ ನಿರಂಜನ್ ಕುಮಾರ್, ಶಾಸಕರಾದ ಪುಟ್ಟರಂಗಶೆಟ್ಟಿ, ಎನ್. ಮಹೇಶ್, ಇತರೆ ಗಣ್ಯರು ಸಾಂಕೇತಿಕವಾಗಿ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.
ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ಎಂ.ರಾಮಚAದ್ರ, ಚುಡಾ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಕುಲಗಾಣ, ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್ ನಾರಾಯಣ ರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಇತರರು ಉಪಸ್ಥಿತರಿದ್ದರು.