ಚಾಮರಾಜನಗರ: ನಗರದ ಶ್ರೀ ಮಹದೇಶ್ವರ ಬಡಾವಣೆಯಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಶ್ರೀ ಭಗೀರಥ ಉಪ್ಪಾರ ಸಮುದಾಯ ಭವನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಕಟ್ಟಡವು ಅತ್ಯಂತ ಸುಂದರವಾಗಿ ಮೂಡಿಬಂದಿದೆ. ಭವನ ನಿರ್ಮಾಣಕ್ಕೆ ಮತ್ತಷ್ಟು ಹಣದ ಅವಶ್ಯಕತೆ ಇರುವುದರಿಂದ ಬೇಕಾಗಿರುವುದರಿಂದ ಸರ್ಕಾರದ ಜೊತೆ ಮಾತನಾಡಿ ಅನುದಾನ ಬಿಡುಗಡೆ ಮಾಡೋ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇವಣ್ಣ, ಉಪ್ಪಾರ ಸಮಾಜದ ಮುಖಂಡ ಕಾಗಲವಾಡಿಮೋಳೆ ಮರಿಸ್ವಾಮಿ, ಮಹದೇವಸ್ವಾಮಿ, ಶಿವಕುಮಾರ್, ಚಾಮರಾಜನಗರ ಜಿಲ್ಲಾ ಉಪ್ಪಾರ ಯುವಕರ ಸಂಘದ ಜಿಲ್ಲಾಧ್ಯಕ್ಷರಾದ ಎಂ.ಜಯಕುಮಾರ್ ಉಪಾಧ್ಯಕ್ಷ ಬಿ.ಸ್ವಾಮಿ ಪ್ರಧಾನ ಕಾರ್ಯದರ್ಶಿ ಸಿ ಎಸ್ ನಾಗರಾಜು ಉಪಸ್ಥಿತರಿದ್ದರು.