ಚಾಮರಾಜನಗರ: ಜಾನುವಾರುಗಳ ಸಂರಕ್ಷಣೆಗಾಗಿ ಗುಂಡ್ಲುಪೇಟೆ ತಾಲೂಕಿನ ಬರಗಿಯಲ್ಲಿ ನಿರ್ಮಾಣ ಮಾಡಲಾಗುವ ಗೋ ಶಾಲೆಗೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಚಾಲನೆ ನೀಡಿದರು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಂದು ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಗೋ ಶಾಲೆ ನಿರ್ಮಾಣಕ್ಕೆ ಸಚಿವರು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಸರ್ಕಾರವು ಗೋ ಹತ್ಯೆ ನಿ?ಧ ಕಾಯ್ದೆ ೨೦೨೦ಕ್ಕೆ ಪೂರಕವಾಗಿ ವಯಸ್ಸಾದ, ಅನುಪಯುಕ್ತ ಜಾನುವಾರುಗಳು ಮತ್ತು ಆಕಸ್ಮಿಕವಾಗಿ ಅಪಘಾತಕ್ಕೆ ಒಳಗಾದ ಜಾನುವಾರುಗಳನ್ನು ಸಂರಕ್ಷಿಸಲು ಜಿಲ್ಲೆಗೊಂದು ಸರ್ಕಾರಿ ಗೋ ಶಾಲೆ ಯೋಜನೆಯನ್ನು ರೂಪಿಸಿದೆ ಎಂದರು.
ಜಿಲ್ಲೆಯಲ್ಲಿ ೨,೬೦,೦೦೦ ಜಾನುವಾರುಗಳಿದ್ದು ಶೇ. ೦.೭೫ರ? ಅಂದರೆ ಅಂದಾಜು ೧೯೫೦ ಜಾನುವಾರುಗಳಿಗೆ ಒಂದು ಸರ್ಕಾರಿ ಗೋ ಶಾಲೆ ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ. ಪ್ರಾಥಮಿಕವಾಗಿ ಸುಮಾರು ೨೫೦ ರಾಸುಗಳಿಗೆ ಗೋ ಶಾಲೆಯನ್ನು ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ ೫೨ ಲಕ್ಷ ರೂ ಬಿಡುಗಡೆ ಗೊಳಿಸಲಾಗಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಮೊದಲ ಹಂತದಲ್ಲಿ ಗೋ ಶೆಡ್ ನಿರ್ಮಾಣ, ಕೊಳವೆ ಬಾವಿ, ದಾಸ್ತಾನು ಕೊಠಡಿ, ಔ?ಧಿ ಸಂಗ್ರಹಣಾ ಕೊಠಡಿ, ಕಚೇರಿ ನಿರ್ಮಿಸಲು ಈಗಾಗಲೇ ಕಾರ್ಯಾದೇಶ ನೀಡಲಾಗಿದೆ. ಯೋಜನೆಯನ್ನು ಪೂರ್ಣಗೊಳಿಸಲು ೩ ತಿಂಗಳ ಕಾಲಾವಕಾಶ ನಿಗದಿ ಮಾಡಲಾಗಿದೆ ಎಂದು ಉಸ್ತುವಾರಿ ಸಚಿವರು ವಿವರಿಸಿದರು.
ಜಿಲ್ಲೆಯಲ್ಲಿ ಚಾಮರಾಜನಗರ ತಾಲೂಕಿನ ಕನಕಗಿರಿಯ ಜೈನ್ ಎಜುಕೇ?ನ್ ಸೊಸೈಟಿ, ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬೃಹನ್ಮಠದ ಶ್ರೀ ಮಲೆ ಮಹದೇಶ್ವರಸ್ವಾಮಿ ಕೃಪಾ ಎಜುಕೇ?ನ್ ಸೊಸೈಟಿಯ ಖಾಸಗಿ ಗೋ ಶಾಲೆಗಳಿಗೆ ಒಂದು ದಿನಕ್ಕೆ ಒಂದು ರಾಸುವಿಗೆ ೧೭ ರೂಪಾಯಿನಂತೆ ನಿರ್ವಹಣಾ ವೆಚ್ಚವನ್ನು ಪಶುಸಂಗೋಪನಾ ಇಲಾಖೆಯಿಂದ ಸಹಾಯ ಧನ ನೀಡಲಾಗುತ್ತಿದೆ. ೨೦೨೧-೨೨ನೇ ಸಾಲಿಗೆ ೪.೨೮ ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ಮಾತನಾಡಿ ಜಿಲ್ಲೆಗೊಂದು ಗೋ ಶಾಲೆ ಎಂಬ ಯೋಜನೆಯಡಿ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮಕ್ಕೆ ಗೋ ಶಾಲೆ ಮಂಜೂರಾಗಿದ್ದು ಇದರ ನಿರ್ಮಾಣ ಕಾರ್ಯಕ್ಕೆ ಇಂದು ಚಾಲನೆ ಕೊಡಲಾಗಿದೆ. ಬರಗಿ ಫಾರಂ ನಲ್ಲಿ ೧೦೦ ಎಕರೆ ಪ್ರದೇಶವಿದ್ದು ಇಲ್ಲಿ ರಾಸುಗಳ ನಿರ್ವಹಣೆಗಾಗಿ ಜಾರಿಗೆ ತಂದಿರುವ ಉತ್ತಮ ಯೋಜನೆ ಇದಾಗಿದೆ ಎಂದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರಾದ ಡಾ. ಸುರೇಶ್, ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.