ಮೈಸೂರು, ಫೆಬ್ರವರಿ- ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಕಾಧಿಕಾರಿ ಬಿ.ಎ.ಪರಮೇಶ್ ಅವರು ಮಂಗಳವಾರ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದರು.
ಲಸಿಕೆ ಪಡೆದ ನಂತರ ನಿಯಮದಂತೆ 30 ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇದ್ದು, ವೈದ್ಯಕೀಯ ತಪಾಸಣೆಗೆ ಸ್ಪಂದಿಸಿದರು.
ಎರಡನೇ ಹಂತದ ಲಸಿಕೆ ನೀಡುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಜಿಲ್ಲೆಯ ಹಿರಿಯ ಅಧಿಕಾರಿಗಳು ಈಗ ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಲಸಿಕೆ ಸುರಕ್ಷಿತವಾಗಿದ್ದು, ಉಪಯೋಗಕಾರಿಯಾಗಿದೆ ಎಂದು ಅವರು ಹೇಳಿದರು.