ಚಾಮರಾಜನಗರ: ಹರದನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜಯಂತಿಯನ್ನು ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಯಶೋದಮ್ಮರವರು ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಪುಟ್ಟರಾಜು, ಕೇಶವಮೂರ್ತಿ, ಯೋಗ ನರಸಿಂಹಸ್ವಾಮಿ, ರಮೇಶ್,ಆರ್. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಪ್ರಕಾಶ್. ಟಿ ಕಂಪ್ಯೂಟರ್ ಆಪರೇಟರ್ ಮಹದೇವನಾಯಕ. ಎಲ್.ಬಿಲ್ ಕಲೆಕ್ಟರ್ ಕೆಂಪಶೆಟ್ಟಿ,ವಾಟರ್ ಮ್ಯಾನ್ ಕುಮಾರಸ್ವಾಮಿ ಮತ್ತಿತರರು ಇದ್ದಾರೆ.