ಚಾಮರಾಜನಗರ: ನಗರದ ಭಾರತ ಸೇವಾದಳ ಜಿಲ್ಲಾ ಸಮಿತಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.
ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಎಂ.ರಾಮಚಂದ್ರ ಅವರು ಡಾ.ಅಂಬೇಡರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ನಂತರ ಮಾತನಾಡಿದ ಅವರು ಅಂಬೇಡ್ಕರ್ ಇಡೀ ಜಗತ್ತು ಮೆಚ್ಚುವ ಸಂವಿಧಾನವನ್ನು ರಚಿಸಿದ್ದಾರೆ. ಈ ಮೂಲಕ ಭಾರತ ದೇಶದ ಆಡಳಿತ ವ್ಯವಸ್ಥೆಗೆ ಹೊಸ ಆಯಾಮ ತಂದುಕೊಟ್ಟಿದ್ದಾರೆ. ದಲಿತರು, ಮಹಿಳೆಯರು ಹಾಗೂ ಕಾರ್ಮಿಕರ ಪರವಾಗಿ ಹೋರಾಡಿ, ಸಮಾಜದಲ್ಲಿ ಅವರ ಹಕ್ಕುಗಳನ್ನು ಸ್ಥಾಪಿಸಿದ್ದಾರೆ. ಅಂಬೇಡ್ಕರ್ ಅವರ ವಿಚಾರಧಾರೆ, ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾರತ ಸೇವಾದಳದ ವಲಯ ಸಂಘಟಕ ಕೆ.ಈರಯ್ಯ ಜಿಲ್ಲಾ ಕೇಂದ್ರ ಗ್ರಂಥಾಲಯ ಸಹಾಯಕರಾದ ಜಯಸ್ವಾಮಿ, ಪ್ರಭಾವತಿ, ರಾಜೇಶ್ವರಿ, ಬಿ.ಸೋಮಣ, ಪ್ರಕಾಶ್, ಮಹದೇವಯ್ಯ ಇತರರು ಹಾಜರಿದ್ದರು.
