ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದಲ್ಲಿಂದು ಆಯೋಜಿಸಲಾಗಿದ್ದ ಸಂವಿಧಾನಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಜಿಲ್ಲಾಡಳಿತ ಭವನ ಆವರಣದಲ್ಲಿರುವ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಪ್ರವಾಸಿ ಮಂದಿರದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಅದ್ದೂರಿ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಚಾಲನೆ ನೀಡಿದರು.
ಇದೇ ವೇಳೆ ಶುಭ ಕೋರಿ ಸಂದೇಶ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸಂವಿಧಾನದ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದ ಇತಿಹಾಸದಲ್ಲಿ ಅಪರೂಪದ ಅತ್ಯಂತ ಪ್ರಮುಖ ಮಹಾನ್ ವ್ಯಕ್ತಿ. ಅಂಬೇಡ್ಕರ್ ರವರ ಬದುಕು ಎಲ್ಲರಿಗೂ ಸ್ಪೂರ್ತಿಯಾಗಿದೆ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿದೀಪ ಎಂದರು.
ಆಸ್ಪೃಷ್ಯತೆ ಬಲವಾಗಿ ಬೇರೂರಿದ್ದ ಕಾಲದಲ್ಲಿ ಬಹಳ ಕ?ದ ದಿನಗಳನ್ನು ಕಂಡಿದ್ದ ಅಂಬೇಡ್ಕರ್ ರವರು ತಮ್ಮ ಛಲ ಸಾಧನೆಯ ಮೂಲಕ ಭವ್ಯ ಭಾರತದ ಕನಸನ್ನು ಕಂಡು ಕ?ಗಳ ನಡುವೆಯೂ ದೇಶದ ಅಧ್ಬುತ ನಾಯಕರಾಗಿ ರೂಪುಗೊಂಡರು ಎಂದು ತಿಳಿಸಿದರು.
ಅಂಬೇಡ್ಕರ್ ಅವರ ಇತಿಹಾಸವನ್ನು ಮರೆತವರು ಇತಿಹಾಸ ನಿರ್ಮಿಸಲಾರರು. ಬದುಕು ಸುದೀರ್ಘವಾಗಿರುವುದಕ್ಕಿಂತ ಶ್ರೇ?ವಾಗಿರಬೇಕು. ಉದಾತ್ತ ಮನಸ್ಸನ್ನು ಬೆಳೆಸುವುದು ಮಾನವನ ಅಸ್ತಿತ್ವದ ಅಂತಿಮ ಗುರಿಯಾಗಬೇಕು ಎಂಬ ಆಶಯಗಳು ಇಂದಿಗೂ ಅನುಕರಣೆಯವಾಗಿದೆ. ಸ್ವಾಭಿಮಾನದ ಬದುಕಿಗೆ ಪ್ರೇರಣೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಆಗಿದ್ದಾರೆ ಎಂದರು.
ಶೋಷಿತರು, ಕಾರ್ಮಿಕರು ಮತ್ತು ಮಹಿಳೆಯರ ಉನ್ನತಿಗಾಗಿ ಹೋರಾಡಿದ ಅಂಬೇಡ್ಕರ್ ಅವರ ಜನ್ಮ ದಿನವನ್ನು ಪ್ರತಿ ವ? ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಅನುದಿನವೂ ನಮ್ಮನ್ನು ಜ್ಞಾಪಿಸುವ, ಎಚ್ಚರಿಸುವ, ಮುನ್ನೆಡಸುವ ಮತ್ತು ಮಾರ್ಗದರ್ಶನ ಮಾಡುವ ಒಂದು ಜೀವಂತ ದಾಖಲೆ ಎಂದರೆ ಅದು ಅಂಬೇಡ್ಕರ್ ರಚಿಸಿದ ಸಂವಿಧಾನ ಎಂದು ತಿಳಿಸಿದರು.
ಶ್ರೇ? ಸಂವಿಧಾನ ನೀಡಿದ ಮಹಾನ್ ಪುರು? ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಶ್ರಮ ಮತ್ತು ತ್ಯಾಗ ಎಂದಿಗೂ ಶ್ಲಾಘನೀಯ. ಅಂಬೇಡ್ಕರ್ ಅವರ ಆಶಯದಂತೆ ನಾವೆಲ್ಲರೂ ಸಮಾನತೆ ಮತ್ತು ಸಹಬಾಳ್ವೆಯಿಂದ ಜೀವನ ನಡೆಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಸಿ.ಎಸ್. ನಿರಂಜನ್ ಕುಮಾರ್, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಸಭೆ ಅಧ್ಯಕ್ಷರಾದ ಆಶಾನಟರಾಜು, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಕುಲಗಾಣ, ಮಾಜಿ ಶಾಸಕರಾದ ಜಿ.ಎನ್. ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಎಚ್.ಸಿ. ಭಾಗೀರಥಿ, ಮುಖಂಡರು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.