ಚಾಮರಾಜನಗರ, ನವೆಂಬರ್ ೪ :- ಗುಂಡ್ಲುಪೇಟೆ ತಾಲ್ಲೂಕು ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್‌ಗೆ (ಡಿಸಿಹೆಚ್‌ಸಿ) ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿಯವರಾದ ಡಾ.ಎಂ.ಆರ್. ರವಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಹಾಗೂ ಸೂಕ್ತ ರೀತಿಯಲ್ಲಿ ಆರೈಕೆ ಮಾಡುವ ಉದ್ದೇಶದಿಂದ ಗುಂಡ್ಲುಪೇಟೆ ಪಟ್ಟಣದಲ್ಲಿ ಕೋವಿಡ್ ಆಸ್ಪತ್ರೆಯನ್ನು ಇತ್ತೀಚೆಗೆ ತೆರೆಯಲಾಗಿದ್ದು ಇಲ್ಲಿ ನೀಡಲಾಗುತ್ತಿರುವ ಚಿಕಿತ್ಸಾ ಸೌಲಭ್ಯಗಳನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು.
ಕೋವಿಡ್-೧೯ ಸಂಬAಧಿ ಸೌಮ್ಯ ಲಕ್ಷಣ ( ಮೈಲ್ಡ್ ಮತ್ತು ಮಾಡರೇಟ್ ) ಇರುವವರಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಆರೈಕೆ ಕೇಂದ್ರ ತೆರೆಯಲಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರದಲ್ಲಿ ದಾಖಲಾಗಿರುವ ಸೋಂಕಿತರ ಸಂಖ್ಯೆ ಹಾಗೂ ಯಾವ ಬಗೆಯ ಚಿಕಿತ್ಸೆ ನೀಡಲಾಗುತ್ತಿದೆ ? ಔಷದೋಪಚಾರ ಹೇಗಿದೆ ? ಎಂಬ ಬಗ್ಗೆ ಕರ್ತವ್ಯ ನಿರತ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯವರೊAದಿಗೆ ಜಿಲ್ಲಾಧಿಕಾರಿಯವರು ಸಮಾಲೋಚಿಸಿ ವಿವರ ಪಡೆದರು.
ಆಸ್ಪತ್ರೆಯಲ್ಲಿ ಆಮ್ಲಜನಕ ಬಳಕೆ ಹೇಗೆ ಮಾಡಲಾಗುತ್ತಿದೆ ? ಎಷ್ಟು ಪ್ರಮಾಣದಲ್ಲಿ ಆಮ್ಲಜನಕ ವ್ಯವಸ್ಥೆ ಅಗತ್ಯವಿದೆ? ರೋಗಿಗಳ ಅವಶ್ಯಕತೆಗೆ ಅನುಗುಣವಾಗಿ ಪೂರೈಕೆ ನಡೆದಿದೆಯೇ ಎಂಬ ಬಗ್ಗೆ ವ್ಯಾಪಕವಾಗಿ ಪರಿಶೀಲಿಸಿದರು. ವೆಂಟಿಲೇಟರ್ ಮಾನಿಟರ್ ಗಳು ಬಳಕೆ ಯಾಗುತ್ತಿವೆಯೇ ಎಂಬ ಬಗ್ಗೆಯೂ ವೈದ್ಯಾಧಿಕಾರಿಗಳಿಂದ ವಿವರ ಪಡೆದ ಜಿಲ್ಲಾಧಿಕಾರಿಯವರು ಹೋಂ ಐಸೊಲೇಷನ್ ಬಯಸಿದವರಿಗೆ ಟೆಲಿಮಾನಿಟರಿಂಗ್ ಮೂಲಕ ಹೇಗೆ ಸಮಾಲೋಚನೆ ನಿಗಾ ವಹಿಸಲಾಗುತ್ತಿದೆ ಎಂಬ ಬಗ್ಗೆಯೂ ಪರಾಮರ್ಶೆ ನಡೆಸಿದರು.
ಆರೈಕೆ ಕೇಂದ್ರದಲ್ಲಿ ದಾಖಲಾಗಿರುವ ಸೋಂಕಿತರ ಆರೈಕೆಗೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ವಿವರ ಪಡೆದ ಜಿಲ್ಲಾಧಿಕಾರಿಯವರು, ಆರೋಗ್ಯ ಸುಧಾರಣೆಗೆ ಲಭ್ಯವಿರುವ ಇತರೆ ಸೌಲಭ್ಯಗಳ ಬಗ್ಗೆಯೂ ಮಾಹಿತಿ ಪಡೆದರು. ತುರ್ತು ಸಂದರ್ಭದಲ್ಲಿ ಜಿಲ್ಲೆಯ ಹಿರಿಯ ವೈದ್ಯಾಧಿಕಾರಿಗಳು ಹಾಗೂ ನೋಡೆಲ್ ಅಧಿಕಾರಿಗಳನ್ನು ಸಂಪರ್ಕಿಸಿ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಸೂಚನೆ ನೀಡಿದರು.
ಆಸ್ಪತ್ರೆಯಲ್ಲಿ ರೋಗಿಗಳಿಗೆ ಯಾವುದೇ ಕೊರತೆ ಬಾರದಂತೆ ಅತ್ಯಂತ ಕಾಳಜಿಯಿಂದ ಔಷದೋಪಚಾರ ಲಭ್ಯವಾಗಬೇಕು, ದೂರುಗಳಿಗೆ ಆಸ್ಪದ ನೀಡದಂತೆ ಅಗತ್ಯ ಇರುವ ಎಲ್ಲಾ ಆರೋಗ್ಯ ಸಂಬAಧಿ ಸೌಲಭ್ಯಗಳನ್ನು ಕಲ್ಪಿಸಬೇಕು, ಸೋಂಕಿತರ ಆರೈಕೆಯಲ್ಲಿ ಯಾವುದೇ ಸಣ್ಣ ಲೋಪವಾಗದಂತೆ ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು.
ಬಳಿಕ ತಾಯಿ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ಅಲ್ಲಿ ಒದಗಿಸಲಾಗಿರುವ ವ್ಯವಸ್ಥೆಗಳನ್ನು ವೀಕ್ಷಿಸಿದರು. ಆಸ್ಪತ್ರೆಗೆ ಬರುವವರು ಕುಳಿತುಕೊಳ್ಳಲು ಮತ್ತಷ್ಟು ಸ್ಥಳವಕಾಶ ಕಲ್ಪಿಸಬೇಕು, ಹೊರರೋಗಿಗಳಾಗಿ ಬರುವವರಿಗೂ ಯಾವುದೇ ತೊಂದರೆಯಾಗದAತೆ ಅಗತ್ಯ ವ್ಯವಸ್ಥೆ ಮಾಡಬೇಕು. ಆರೋಗ್ಯ ಸಿಬ್ಬಂದಿಯಾಗಲಿ ಅಥವಾ ಔಷದ ಪೂರೈಕೆಯಲ್ಲಾಗಲಿ ಯಾವುದೇ ಕೊರತೆ ಇರಬಾರದು. ಜನರ ಅಗತ್ಯಕ್ಕೆ ತಕ್ಕಂತೆ ಎಲ್ಲವನ್ನೂ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ರವಿಕುಮಾರ್, ಡಾ.ರವೀಂದ್ರ, ಡಾ.ರವಿಕುಮಾರ್ ಇತರರು ಹಾಜರಿದ್ದರು.