ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನೂತನ ಜಿಲ್ಲಾಧಿಕಾರಿಯವರಾದ ಡಿ.ಎಸ್. ರಮೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ನೂತನ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಗೆ ಪುಸ್ತಕ ನೀಡುವ ಮೂಲಕ ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸ್ವಾಗತಿಸಿದರು.
ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು ನೂತನ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರನ್ನು ಸ್ವಾಗತಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರಿಗೆ ಪರಿಚಯಿಸಿಕೊಂಡರು. ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
