ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೊರೊನಾ ಸಾಂಕ್ರಾಮಿಕದ ನಿರ್ವಹಣೆಯನ್ನು ಸರ್ಮಪಕವಾಗಿದ್ದು, ಎಲ್ಲರಿಗೂ ಲಸಿಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದಗೌಡ ಹೇಳಿದ್ದಾರೆ.
ಕೆ.ಆರ್.ಪುರ ಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತಪಟ್ಟ 115 ಕುಟುಂಬಗಳಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ವೈಯಕ್ತಿಕವಾಗಿ ಪ್ರತಿ ಕುಟುಂಬಕ್ಕೆ ಒಂದು ಲಕ್ಷ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಭೈರತಿ ಬಸವರಾಜ್ ಅವರು ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಆರ್ಥಿಕ ನೆರವಿನ ಮೂಲಕ ಸಾಂತ್ವನ ಹೇಳುತ್ತಿರುವುದು ಶ್ಲಾಘನೀಯ. ವರ್ಷಾಂತ್ಯದ ವೇಳೆಗೆ ದೇಶದ ಎಲ್ಲ ಅರ್ಹರಿಗೂ ಕೊರೊನಾ ಸೋಂಕು ನಿರೋಧಕ ಚುಚ್ಚುಮದ್ದು ನೀಡುವ ಗುರಿ ಇದ್ದು, ಪ್ರತಿಯೊಬ್ಬರು ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.
ದುಡಿಯುವ ಕೈಗಳಿಗೆ ಕೇಲಸವಿಲ್ಲದ ಸಂದರ್ಭದಲ್ಲಿ ಒಂದು ಲಕ್ಷ ಕಿಟ್ ವಿತರಣೆ ಮಾಡುವ ಮೂಲಕ ಸಾಮಾಜಿಕ ಕಳಕಳಿ ಮಾಡಿದ ಬೈರತಿ ಬಸವರಾಜ್ ಅವರು ಪ್ರತಿ ಹಂತದಲ್ಲಿ ಸಾರ್ವಜನಿಕ ಸೇವೆ ನಿಂತಿರುವವುದು ಸಂತಸ ತಂದಿದೆ ಎಂದು ವಿವರಿಸಿದರು.
ಬೈರತಿ ಬಸವರಾಜ್ ಮಾತನಾಡಿ ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಆರೋಗ್ಯ ಕಾಪಾಡಿಕೊಳ್ಳಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆ.ಆರ್.ಪುರದಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾರ್ಲಾಪಣೆ ಮಾಡುವ ಮೂಲಕ 512 ಜಯಂತಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹಸಚಿವ ಬಸವರಾಜ ಬೊಮ್ಮಾಯಿ ಸಚಿವರಾದ ಆರ್. ಅಶೋಕ್, ಎಸ್.ಟಿ. ಸೋಮಶೇಖರ್, ಅರವಿಂದ ಲಿಂಬಾವಳಿ, ಮಾಜಿ ಪಾಲಿಕೆ ಸದಸ್ಯರಾದ ಜಯಪ್ರಕಾಶ್, ಅಂತೋಣಿಸ್ವಾಮಿ, ಶ್ರೀಕಾಂತ್, ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು.