.
ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈಸೂರು ಹಾಗೂ ಜನ ಆರೋಗ್ಯ ಕೇಂದ್ರ ಎಪಿಡಿಮಿಯಾಲಜಿ ವಿಭಾಗ ನಿಮಾನ್ಸ್ ಬೆಂಗಳೂರು ಇವರ ಸಹಯೋಗದೊಂದಿಗೆ ಯುವ ಸ್ಪಂದನ ಅರಿವು ಕಾರ್ಯಕ್ರಮವನ್ನು ದಿನಾಂಕ 23.12. 2021 ರಂದು ಜೆಎಸ್ಎಸ್ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಕುಮಾರಿ ಸುಷ್ಮಾ. ಎಸ್ ಯುವಸಮಾಲೋಚಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈಸೂರು ಇವರು ಯುವಸ್ಪಂದನ ಕಾರ್ಯಕ್ರಮದಲ್ಲಿ ಶಿಕ್ಷಣ ಮತ್ತು ವೃತ್ತಿ, ವ್ಯಕ್ತಿತ್ವ ಬೆಳವಣಿಗೆ, ಸಂಬಂಧಗಳು, ಆರೋಗ್ಯ ಮತ್ತು ಜೀವನಶೈಲಿ, ಮತ್ತು ಸುರಕ್ಷತೆ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ಶ್ರೀಮತಿ ಭಾನಮತಿ ಡಿ ಉಪನ್ಯಾಸಕರು ಉಪಸ್ಥಿತರಿದ್ದರು.