ಮೈಸೂರು. ನವೆಂಬರ್: ಭಾರತೀಯ ಅಂಚೆ ಇಲಾಖೆ ವತಿಯಿಂದ 2020-2021 ಸಾಲಿನ ಸರಣಿಯ ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯು ನವೆಂಬರ್ 9 ರಂದು ಪ್ರಾರಂಭವಾಗಲಿದ್ದು, ಗ್ರಾಹಕರು ತಮ್ಮ ಸಮೀಪದ ಅಂಚೆ ಕಚೇರಿಯ ಮೂಲಕ ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯಲ್ಲಿ ಹೂಡಿಕೆ ಮಾಡಲು ನವೆಂಬರ್ 13 ರವರೆಗೆ ಅವಕಾಶವಿರುತ್ತದೆ.
ಸಾವರಿನ್ ಗೋಲ್ಡ್ ಬಾಂಡ್ ವೈಶಿಷ್ಟ್ಯಗಳು: ಕನಿಷ್ಟ ಹೂಡಿಕೆ ಒಂದು ಗ್ರಾಂ ಆಗಿದ್ದು, ವ್ಯಕ್ತಿಗಳಿಗೆ ಮತ್ತು ಹಿಂದೂ ಅವಿಭಕ್ತ ಕುಟುಂಬಗಳಿಗೆ 4 ಕೆಜಿ, ಟ್ರಸ್ಟ್ ಮತ್ತು ಘಟಕಗಳಿಗೆ 20 ಕೆಜೆ (ಒಂದು ಆರ್ಥಿಕ ವರ್ಷದಲ್ಲಿ) ಗರಿಷ್ಟ ಹೂಡಿಕೆ ಮಾಡಬಹುದು.
ಬಾಂಡ್ ಅವಧಿಯು 8 ವರ್ಷವಾಗಿದ್ದು, ಬಾಂಡ್ ಅವಧಿ ಪೂರ್ಣವಾದಲ್ಲಿ ಮಾರುಕಟ್ಟೆಯಲ್ಲಿರುವ ಚಿನ್ನದ ದರದÀ ಮೊತ್ತವನ್ನು ನೀಡಲಾಗುವುದು. ವಾರ್ಷಿಕ ಶೇ.2.5 ರಷ್ಟು ನಿಶ್ಚಿತ ಬಡ್ಡಿಯೂ (ಅರ್ಧವಾರ್ಷಿಕ –ವರ್ಷಕ್ಕೆ ಎರಡು ಬಾರಿ) ಲಭ್ಯವಿರುತ್ತದೆ. ಅಲ್ಲದೆ 5,6, ಮತ್ತು 7ನೇ ವರ್ಷಗಳಲ್ಲಿಯೂ ನಿರ್ಗಮಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 0821-2417308, 2017307, 9845107947 ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin