ಮೈಸೂರು ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಫಲಪುಷ್ಪ ಪ್ರದರ್ಶನದ ಸಿದ್ಧತೆಗಳನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪರಿಶೀಲಿಸಿದರು.

ಕುಪ್ಪಣ್ಣ ಪಾರ್ಕ್ ನ ಗಾಜಿನ ಮನೆಯಲ್ಲಿ ನಿರ್ಮಿಸುತ್ತಿರುವ ರಾಷ್ಟ್ರಪತಿ ಭವನದ ಪ್ರತಿರೂಪ, ವಿವಿಧ ಪುಷ್ಪಗಳಿಂದ ಅಲಂಕರಿಸಿರುವ ಹೂವಿನ ಕುಂಡಗಳು, ವಿಶೇಷ ಪ್ರಭೇದದ ಸಸ್ಯಗಳನ್ನು ವೀಕ್ಷಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಸುಮಾರು 50 ಸಾವಿರಕ್ಕೂ ಅಧಿಕ ವಿವಿಧ ಬಗೆಯ ಪುಷ್ಪಗಳನ್ನು ಫಲಪುಷ್ಪ ಪ್ರದರ್ಶನದಲ್ಲಿ ಸಾರ್ವಜನಿಕರು ವೀಕ್ಷಿಸಬಹುದಾಗಿದೆ. ಸೆ.26ರಿಂದ ಅಕ್ಟೋಬರ್ 5ರವರೆಗೆ ಫಲಪುಷ್ಪ ಪ್ರದರ್ಶನ ಇರಲಿದೆ. ಬೇಡಿಕೆ ಬಂದರೆ ಮತ್ತೆ ಮೂರು ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಫಲಪುಷ್ಪ ಪ್ರದರ್ಶನ ಸಮಿತಿಯ ಅಧ್ಯಕ್ಷ ಎಸ್.ಆರ್.ನಂಜಪ್ಪ,ಮೇಯರ್ ಶಿವಕುಮಾರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು