ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ ಪ್ರಮುಖರ ಸಭೆ
ಮೈಸೂರು: ಪಕ್ಷ ನನಗೆ ಮುಖ್ಯ. ಸುಮ್ಮನೆ ಮೈಸೂರು ನಗರಕ್ಕೆ ಬಂದು ಸುಮ್ಮನೆ ಹೋಗುವ ಸಚಿವ ನಾನಲ್ಲ. ಎಲ್ಲರೂ ಸೇರಿ ಪಕ್ಷಕ್ಕಾಗಿ ದುಡಿಯೋಣ. ಪಂಚಾಯಿತಿ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸೋಣ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಚುಂಚನಕಟ್ಟೆಯಲ್ಲಿ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಸಚಿವರು ಮಾತನಾಡಿದರು.
ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯಬೇಕು. ಪಕ್ಷ ಕಾರ್ಯಕರ್ತರ ಬೆನ್ನಿಗೆ ಖಂಡಿತ ನಿಲ್ಲಲಿದೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಸಹ ಕಾರ್ಯಕರ್ತರ ಪರವಾಗಿದ್ದೇನೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಹೇಳಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, ತಾಲೂಕು, ಜಿಲ್ಲಾ ಪಂಚಾಯಿತಿ ಮಟ್ಟದಲ್ಲೂ ಅಧಿಕಾರಕ್ಕೆ ತರಬಹುದು ಎಂಬ ನಿಟ್ಟಿನಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಪಕ್ಷದ ಮುಖಂಡರಾದ ಮಹದೇವಯ್ಯ ಹೇಳಿದರು.
ಸಚಿವರ ಕಾಳಜಿಯನ್ನು ಎಲ್ಲರೂ ಅರ್ಥಮಾಡಿಕೊಂಡು ಶ್ರಮಿಸಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಿಕೊಂಡು ಬರುವಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು.
ಕಾರ್ಯಕರ್ತರನ್ನು ನಾವು ಎಂದೂ ಮರೆಯಬಾರದು. ಕಾರ್ಯಕರ್ತರಿಂದಲೇ ನಾವು ಜಯಗಳಿಸುವುದು. ನಿಮ್ಮ ಶ್ರಮದಿಂದ ಆಯ್ಕೆಯಾದ ನಾವು ಈಗ ನಿಮ್ಮ ಚುನಾವಣೆಯಲ್ಲಿ ನಿಮಗೆ ಶಕ್ತಿ ತುಂಬುವ ಹಾಗೂ ಶ್ರಮವಹಿಸುವ ಕಾರ್ಯವನ್ನು ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.
ಯಾರಿಗೆ ಯಾವುದೇ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ, ಚುನಾವಣೆ ಸಂದರ್ಭದಲ್ಲಿ ಇದನ್ನು ಬದಿಗಿಟ್ಟು ಕೆಲಸ ಮಾಡೋಣ. ಪಕ್ಷದ ಗೆಲುವಿಗೆ ಶ್ರಮಿಸೋಣ ಎಂದು ತಿಳಿಸಿದರು.
ಇನ್ನು ಕೆಲವು ಅಧಿಕಾರಿಗಳು ಪಕ್ಷದ ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂಬ ದೂರುಗಳು ಬಂದಿವೆ. ಆದರೆ, ನ್ಯಾಯಯುತವಾದ ಕೆಲಸಗಳಿಗೆ ಸಹಕಾರ ಕೊಡಲೇಬೇಕು ಎಂದು ನಾನು ನಿರ್ದೇಶಿಸಿದ್ದೇನೆ. ಯಾರೇ ಬಂದರೂ ಅವರ ಕೆಲಸವನ್ನು ಮಾಡಿಕೊಡುವುದು ಸರ್ಕಾರಿ ಅಧಿಕಾರಿಗಳ ಕರ್ತವ್ಯ ಎಂದು ಸಚಿವರು ತಿಳಿಸಿದರು.
ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷರಾದ ಮಂಗಳಾ ಸೋಮಶೇಖರ್ ಮಾತನಾಡಿ, ಮೈಸೂರು ಜಿಲ್ಲೆಯಲ್ಲಿರುವ 49 ಶಕ್ತಿ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಪಕ್ಷದ ಬಲವರ್ಧನೆಗೆ ಸಹಕಾರ ನೀಡುವ ಹಾಗೂ ಕಾರ್ಯಕರ್ತರಿಗೆ ನೈತಿಕ ಬಲ ತುಂಬುವ ಕೆಲಸವನ್ನು ತಮ್ಮ ಒತ್ತಡದ ಕಾರ್ಯಗಳ ಮಧ್ಯೆಯೂ ನಿರ್ವಹಣೆ ಮಾಡುತ್ತಿರುವ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಲಭಿಸಿರುವುದು ನಮ್ಮ ಸೌಭಾಗ್ಯವೇ ಸರಿ ಎಂದು ತಿಳಿಸಿದರು.
ತಿಪ್ಪೂರಲ್ಲಿ ಸಭೆ
ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ತಿಪ್ಪೂರಿನಲ್ಲಿಯೂ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಮಹಾ ಶಕ್ತಿ ಕೇಂದ್ರದ ಸಭೆ ನಡೆಸಿದ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಕಾರ್ಯಕರ್ತರನ್ನುದ್ದೇಶಿ ಮಾತನಾಡಿದರು.