ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಹನೂರು ತಾಲೂಕಿನ ಮಲೆಮಹದೇಶ್ವರಬೆಟ್ಟ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ವಡಕೆಹಳ್ಳ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಾಲಾ ರಿವಿಟ್‌ಮೆಂಟ್ ಹಾಗೂ ಹಳೆಯೂರು ಗ್ರಾಮದಲ್ಲಿ ರಸ್ತೆ ಕಲ್ಲುಪಿಚ್ಚಿಂಗ್ ಕಾಮಗಾರಿ ಹಾಗೂ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೧೫ನೇ ಹಣಕಾಸು ಯೋಜನೆಯಡಿ ನಿರ್ವಹಿಸಲಾಗುತ್ತಿರುವ ದುರಸ್ಥಿ ಕಾರ್ಯವನ್ನು ಪರಿಶೀಲಿಸಿದರು. ಮಲೆಮಹದೇಶ್ವರ ಬೆಟ್ಟ ಗ್ರಾಮದಲ್ಲಿ ಪಾಲಾರ್ ಮುಖ್ಯರಸ್ತೆಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿರುವ ಗರಿಕೆಕಡ್ಡಿ ಕೆರೆ ಅಭಿವೃದ್ದಿ ಕಾಮಗಾರಿ ವೀಕ್ಷಿಸಿದರು.
ಜಲಶಕ್ತಿ ಅಭಿಯಾನದಡಿ ಅಂತರ್ಜಲ ಅಭಿವೃದ್ದಿ ಆಧಾರಿತ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಅನು?ನಗೊಳಿಸುವಂತೆ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ಜನರಿಗೆ ಉದ್ಯೋಗ ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಚನೆ ನೀಡಿದರು.
ಶಾಲಾ ಅಭಿವೃದ್ದಿಗೆ ಪೂರಕವಾಗಿರುವ ಕಾಂಪೌಂಡ್, ಶೌಚಾಲಯ, ಆಟದ ಮೈದಾನ ಕಾಮಗಾರಿಯನ್ನು ತುರ್ತಾಗಿ ಕೈಗೊಂಡು ಪ್ರಗತಿ ಸಾಧಿಸಬೇಕು. ಅಮೃತ ಸರೋವರ ಯೋಜನೆಯಡಿ ಆಯ್ಕೆಯಾದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪರಿಗಣಿಸಿ ಅನು?ನಗೊಳಿಸುವಂತೆ ಕೆ.ಎಂ. ಗಾಯಿತ್ರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹನೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಿ. ಶ್ರೀನಿವಾಸ್, ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕಿರಣ್‌ಕುಮಾರ್ ಇತರರು ಇದ್ದರು.