ಚಾಮರಾಜನಗರ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ೨೦೨೧-೨೨ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಪ್ರವರ್ಗ-೧ ರ ೫೩(ಎ) ರಿಂದ ೫೩(ವಿ) ಉಪ್ಪಾರ, ಬೆಲ್ದರ್, ಚುನಾರ್, ಗಾವಾಡಿ, ಗೌಂದಿ, ಕಲ್ಲು ಕುಟಿಗ ಉಪ್ಪಾರ, ಲೋನಾರಿ, ಮೇಲು ಸಕ್ಕರೆಯವರು, ಮೇಲು ಸಕ್ಕರೆ, ನಾಮದ ಉಪ್ಪಾರ, ಪಡಿತ್/ಪಡ್ತಿ, ಪಡಿತಿ, ಪಾಡಿ, ಸಗರ, ಸುಣ್ಣಗಾರ, ಸುಣ್ಣ ಉಪ್ಪಾರ, ಉಪ್ಪಳಿಗ, ಉಪ್ಪಳಿಗ ಶೆಟ್ಟಿ, ಉಪ್ಪಳಿಯನ್, ಉಪ್ಪೇರ, ಯಕಲಾರ, ಎಕ್ಕಲಿ ಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಕನಿಷ್ಠ ೨ ಎಕರೆಯಿಂದ ಗರಿಷ್ಠ ೫ ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ವಾರ್ಷಿಕ ವರಮಾನ ೯೮ ಸಾವಿರ ರೂ ಗಳ ಮಿತಿಯಲ್ಲಿರಬೇಕು. ಕನಿಷ್ಠ ೧೮ ರಿಂದ ೫೫ರ ವಯೋಮಿತಿಯಲ್ಲಿರಬೇಕು. 
ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ ೨.೨೫ ಲಕ್ಷ ರೂ ಗಳನ್ನು ನಿಗದಿಪಡಿಸಲಾಗಿದ್ದು, ನಿಗದಿತ ಘಟಕ ವೆಚ್ಚದಿಂದ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಒದಗಿಸಲಾಗುವುದು. ನಿಗಮದ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. 
ಅರ್ಜಿಗಳನ್ನು ನಿಗಮದ ವೆಬ್‌ಸೈಟ್ https://upparadevelopment.karnataka.gov.in ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ಆಧಾರ್ ಕಾರ್ಡ್ ತಂದು ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದು. ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಮಾರ್ಚ್ ೧೦ ಕಡೆಯ ದಿನವಾಗಿದೆ. 
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ ೦೮೨೨೬-೨೨೩೫೮೭ ಸಂಪರ್ಕಿಸುವಂತೆ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.