ಚಾಮರಾಜನಗರ: ತಾಲೂಕಿನ ಆಲೂರು ಗ್ರಾಮದ ಉಪ್ಪಾರಸಮುದಾಯದಬೀದಿಯಲ್ಲಿ ವಿಶೇಷ ಅನುದಾನ ೨೦ ಲಕ್ಷ ರೂ.ವೆಚ್ಚದಲ್ಲಿ ಸಿಸಿರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು
ನಂತರ ಮಾತನಾಡಿದ ಅವರು, ತಮ್ಮ ಕೇತ್ರವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ದರಾಗಿ ಗ್ರಾಮಗಳಲ್ಲಿ ರಸ್ತೆ ಚರಂಡಿ, ಸಮುದಾಯ ಭವನ ಆಶ್ರಯಮನೆ ಸೇರಿದಂತೆ ಸರಕಾರ ಮಂಜೂರುಮಾಡುವ ಅನುದಾನ ಹಾಗೂ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ, ಕಾಮಗಾರಿ ನಿರ್ವಹಣೆ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು ಎಂದು ತಿಳಿಸಿದರು.
ಗ್ರಾಮಪಂಚಾಯಿತಿ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯರಾದ ಆಶಾಲತಾ, ನಂದಿನಿ, ಎಪಿಎಂಸಿ ನಿರ್ದೇಶಕ ಪ್ರದೀಪ್, ಆಲೂರು ಕುಮಾರ್‌ಗ್ರಾಮಸ್ಥರು ಹಾಜರಿದ್ದರು.