ಮೈಸೂರು, ಫೆ.17: ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲಮಹಾಸಂಸ್ಥಾನಕ್ಕೆ ಸೇರಿದ ಶ್ರೀ ರಾಘವೇಂದ್ರಸ್ವಾಮಿಗಳವರ ಮಠ, ಸುಬ್ಬರಾಯನಕೆರೆ ನಾರಾಯಣಶಾಸ್ತ್ರಿ ರಸ್ತೆ, ಮೈಸೂರಿನಲ್ಲಿ ಶ್ರೀ ರಾಘವೇಂದ್ರಸ್ವಾಮಿಗಳವರ ಪಟ್ಟಾಭಿಷೇಕ ಹಾಗೂ ವರ್ಧಂತಿ ಮಹೋತ್ಸವದ ಅಂಗವಾಗಿ “ಗುರು ವೈಭವೋತ್ಸವ 2026” ಫೆಬ್ರವರಿ 19 ರಿಂದ 24 ರವರೆಗೆ ಭಕ್ತಿಭಾವದಿಂದ ನಡೆಯಲಿದೆ.

ಮಹೋತ್ಸವದ ಅಂಗವಾಗಿ ಪ್ರತಿದಿನ ವಿಶೇಷ ಪೂಜೆ, ವಿವಿಧ ಹೋಮಗಳು, ಪಂಡಿತರಿಂದ ಉಪನ್ಯಾಸಗಳು ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಠದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.24 ರಂದು ಶ್ರೀ ರಾಘವೇಂದ್ರಸ್ವಾಮಿಗಳವರ ಜನ್ಮ ದಿನೋತ್ಸವ ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅನುಗ್ರಹಕ್ಕೆ ಪಾತ್ರರಾಗುವಂತೆ ಮಠದ ವತಿಯಿಂದ ಮನವಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗೆ: 8861647344 / 9480510156.

Leave a Reply