ಗುಂಡ್ಲುಪೇಟೆ: ಜಗಜ್ಯೋತಿ ಬಸವಣ್ಣನವರ ಸಮಕಾಲಿನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವಾದರ್ಶ ಇಂದಿಗೂ ಅನನ್ಯವಾಗಿವೆ. ಅವುಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ರವಿಶಂಕರ್ ಸಲಹೆ ನೀಡಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಹಡಪದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಹಡಪದ ಸಮಾಜವು ಸಣ್ಣ ಸಮಾಜವಾಗಿದ್ದು, ಇದರ ಬೆಳವಣಿಗೆಗೆ ಎಲ್ಲರೂ ತಮ್ಮ ತನು, ಮನ, ಧನವನ್ನು ಸಮರ್ಪಣಾ ಭಾವನೆಯಿಂದ ಮತ್ತು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.

ಹಡಪದ ಅಪ್ಪಣ್ಣನವರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗುವ ಮೂಲಕ ಸಮಾಜದಲ್ಲಿನ ಅಂಕು ಡೊಂಕು ಹಾಗೂ ಅನಿಷ್ಟ ಪದ್ಧತಿಯನ್ನು ಹೊಗಲಾಡಿಸುವ ಮೂಲಕ ಸಮಾನತೆಯನ್ನು ಸಾರಿದರು. ಅಂಥವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ತಿಳರಿಮೆ ತೊರೆದು ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಕೃಷ್ಣ, ಉಪಾಧ್ಯಕ್ಷ ಮಹದೇವ್, ಕಾರ್ಯದರ್ಶಿ ಪರಶಿವಮೂರ್ತಿ, ಮುಖಂಡರಾದ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

 

ವರದಿ: ಬಸವರಾಜು ಎಸ್. ಹಂಗಳ

By admin