ಮೈಸೂರು: ಮೈಸೂರಿನ ಅವಧೂತ ದತ್ತಪೀಠದ ವತಿಯಿಂದ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಫೆಬ್ರವರಿ 14ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಹನುಮಾನ್ ಚಾಲೀಸಾ ಮಹಾಪಾರಾಯಣ ಮಹಾಯಜ್ಞವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಪ್ರಯುಕ್ತ ಚಾಮರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ರಥೋತ್ಸವ ಹಾಗೂ ಪ್ರಚಾರ ಅಭಿಯಾನಕ್ಕೆ ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿ ಇಂದು ನಗರ ಬಿಜೆಪಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಲ್. ನಾಗೇಂದ್ರ ಪುಷ್ಪನಮನ ಸಲ್ಲಿಸಿ ಪ್ರಚಾರ ವಾಹನ ಮತ್ತು ಹನುಮಾನ್ ಟ್ಯಾಬ್ಲೋ ಸ್ಥಬ್ಧಚಿತ್ರ ವಾಹನಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಗಣಪತಿ ಸಚ್ಚಿದಾನಂದ ಆಶ್ರಮವು ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನಹಿತ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು, ಫೆಬ್ರವರಿ 14ರಂದು ನಡೆಯುವ ಶ್ರೀ ಹನುಮಾನ್ ಚಾಲೀಸಾ ಕಾರ್ಯಕ್ರಮವು ಸರ್ವಜನ ಹಿತಕ್ಕಾಗಿ ಹಮ್ಮಿಕೊಂಡಿದೆ. ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಎಸ್.ಟಿ. ಮೋರ್ಚಾ ಅಧ್ಯಕ್ಷ ಪಡುವಾರಹಳ್ಳಿ ಎಂ. ರಾಮಕೃಷ್ಣ, ನಗರ ಬಿಜೆಪಿ ಕಾರ್ಯದರ್ಶಿ ಎಂ.ಎಸ್. ಪುನೀತ್, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಜನಹಿತ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಎಸ್. ಕೃಷ್ಣಕುಮಾರ್ (ಸಿ.ಡಿ), ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕರಾದ ಎನ್. ಯೋಗಾನಂದ್, ಕೆ. ಗಿರೀಶ್, ಅಜಯ್ ಶಾಸ್ತ್ರೀ, ವಿಕಾಸ್ ಶಾಸ್ತ್ರೀ, ಆಶ್ರಮದ ರಮೇಶ್, ವಿನಯ್ ಬಾಬು, ಪ್ರಜ್ವಲ್, ತೇಜಸ್ ವೇಣು, ಜೆ.ಸಿ.ಬಿ. ರವಿ, ಸಂತೋಷ, ಛಾಯಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
