ಚಾಮರಾಜನಗರ: ಕರ್ನಾಟಕ ಸೇನಾ ಪಡೆಯು ಕೊರೊನಾ ಸಂಕಷ್ಟದ ಕಾಲದಲ್ಲಿ ಹಸಿದ ಹೊಟ್ಟೆಗೆ ಅನ್ನ ನೀಡುವ ಕಾಯಕದಲ್ಲಿ ತೊಡಗಿಸಿಕೊಂಡಿದೆ.

ಪಟ್ಟಣದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ ಬಡ ಜನತೆಗೆ ಆಹಾರವನ್ನು ವಿತರಣೆ  ಮಾಡುವ ಮೂಲಕ ಮಾನವೀಯತೆ ಮೆರೆದಿದೆ. ಪಟ್ಟಣದಲ್ಲಿ ಪ್ರತಿನಿತ್ಯ ಸಾರ್ವಜನಿಕರು ತುರ್ತು ಕೆಲಸ ಕಾರ್ಯಗಳಿಗೆ ಆಗಮಿಸಿದಾಗ ಊಟಕ್ಕಾಗಿ ಪರದಾಡುವುದನ್ನು ಕಂಡಿರುವ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಆಹಾರ ಪೊಟ್ಟಣ್ಣಗಳನ್ನು ವಿತರಣೆ ಮಾಡಿದರು.

ಈ ವೇಳೆ ಸಾರ್ವಜನಿಕರು ಸರದಿ ಸಾಲಿನಲ್ಲಿ ಬಂದು ಆಹಾರವನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸುತ್ತಿದ್ದ ದೃಶ್ಯ ಕಂಡು ಬಂತು.

By admin