ಮಂಡ್ಯ: ತಾಲೂಕಿನ ಹೊಳಲು ಗ್ರಾಮದಲ್ಲಿ ಕೋರೋನಾ ಎರಡನೇ ಅಲೆ ತೀವ್ರವಾಗುತ್ತಿರುವ ಹಿನ್ನಲೆಯಲ್ಲಿ ಹೊಳಲು ಗ್ರಾಮ ಪಂಚಾಯಿತಿಯಿಂದ ಗ್ರಾ.ಪಂ. ಅಧ್ಯಕ್ಷ ಎಚ್.ಡಿ. ರವಿ ಅವರು ರಾಸಾಯನಿಕ ಸಿಂಪಡಣಾ ಕಾರ‍್ಯಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ದಿನೇ ದಿನೇ ಗ್ರಾಮದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣ ಗ್ರಾ.ಪಂ. ಅಧಿಕಾರಿಗಳು, ಸಿಬ್ಬಂದಿಗಳೆಲ್ಲರೂ ಸೇರಿ ಗ್ರಾಮದ ಪ್ರಮುಖ ರಸ್ತೆ, ಚರಂಡಿ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ ಎಂದರು.
ಪಿಡಿಓ ಮಾತನಾಡಿ, ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣ ಸರ್ಕಾರದ ಆದೇಶದ ಮೇರೆಗೆ ಸಾರ್ವಜನಿಕರು ಯಾರೂ ಮನೆಯಿಂದ ಹೊರಗೆ ಬರಬಾರದು. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ನಿಗದಿತ ಸಮಯದಲ್ಲಿ ಮಾತ್ರ ಹೊರಗೆ ಬಂದು ವಸ್ತುಗಳನ್ನು ಖರೀದಿಸಿ ಶೀಘ್ರ ಮನೆ ಸೇರಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಾರ್ವಜನಿಕರ ಸಹಕಾರವಿಲ್ಲದೆ ಸೋಂಕು ಕಡಿಮೆ ಮಾಡಲು ಸಾಧ್ಯವಿಲ್ಲ. ಸಮುದಾಯದ ಸಹಕಾರ ಅತ್ಯಗತ್ಯ. ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್ ಬಳಸಬೇಕು ಎಂದು ಕಿವಿಮಾತು ಹೇಳಿದರು.
ಸದಸ್ಯರಾದ ನಾರಾಯಣ, ಅಭಿನಂದನ್, ಜಯಪ್ರಕಾಶ್, ಪಲ್ಲವಿ, ಜಯಪ್ರಕಾಶ್‌ನಾರಾಯಣ್, ಯುವ ಮುಖಂಡ ಚೇತನ್, ಗೌರಮ್ಮ, ಮಂಜು, ಗಣೇಶ್, ಕಾರ‍್ಯದರ್ಶಿ ಪ್ರಕಾಶ್ ಮತ್ತಿತರರು ಜಾಗೃತಿ ಮೂಡಿಸಿದರು.

By admin