ಮೈಸೂರು: ಕುವೆಂಪುನಗರದ ಅನಿಕೇತನ ರಸ್ತೆಯಲ್ಲಿರುವ ‘ಚಂದನ’ ನಿವಾಸದ ಮೇಲ್ಛಾವಣಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಸಹಾಯಕ ಆಡಳಿತಾಧಿಕಾರಿ ಹಾಗೂ ಜೆಎಸ್‌ಎಸ್ ಎಂ.ಸಿ. ಅಧ್ಯಕ್ಷ ಎಂ. ಜಯಶಂಕರ್, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.
ಮನೆಯ ಮೇಲ್ಛಾವಣಿಯಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವ ಆಚರಿಸಿದ ಕುಟುಂಬವು ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ಸಂದೇಶ ಸಾರಿತು.
