ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ೨೦ ಸರಣಿಮೊದಲ ಪಂದ್ಯ ಮುಕ್ತಾಯವಾಗಿದ್ದು ಭಾರತ ಭರ್ಜರಿ ಗೆಲುವಿನೊಂದಿಗೆ ಮುನ್ನಡೆಯನ್ನು ಸಾಧಿಸಿದೆ. ಇದೀಗ ಎರಡನೇ ಪಂದ್ಯವನ್ನಾಡಲು ಭಾರತ ಹಾಗೂ ಶ್ರೀಲಂಕಾ ಎರಡೂ ತಂಡಗಳು ಸಜ್ಜಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ೦ ಸರಣಿಯನ್ನು ವೈಟ್ವಾಶ್ ಮಾಡಿದ ಹುಮ್ಮಸ್ಸಿನಲ್ಲಿರುವ ಭಾರತ ಶ್ರೀಲಂಕಾ ವಿರುದ್ಧವೂ ಅಂತಾದ್ದೇ ಸಾಧನೆಗೆ ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಭಾರೀ ಅಂತರದ ಸೋಲು ಕಂಡಿರುವ ಶ್ರೀಲಂಕಾ ಸಮರ್ಥ ಪೈಪೋಟಿ ನಡೆಸಲು ಕಾಯುತ್ತಿದೆ.


ಮೊದಲ ಪಂದ್ಯ ಲಕ್ನೋದಲ್ಲಿ ನಡೆದ ಬಳಿಕ ಮುಂದಿನ ಎರಡು ಪಂದ್ಯಗಳು ಧರ್ಮಶಾಲಾದಲ್ಲಿ ಆಯೋಜನೆಯಾಗಲಿದೆ. ಈ ಪಂದ್ಯಕ್ಕಾಗಿ ಎರೂ ತಂಡಗಳು ಈಗ ಧರ್ಮಶಾಲಾ ತಲುಪಿದೆ. ಈ ಎರಡನೇ ಪಂದ್ಯವನ್ನು ಆಯೋಜಿಸುತ್ತಿರುವ ಧರ್ಮಶಾಲಾದ ಹೆಚ್ಪಿಸಿಎ ಕ್ರೀಡಾಂಗಣದ ಪಿಚ್ ರಿಪೋರ್ಟ್, ಹವಾಮಾನ ವರದಿ ಹಾಗೂ ಕೆಲ ಕುತೂಹಲಕಾರಿ ಅಂಕಿ ಅಂಶಗಳನ್ನು ನೋಡೋಣ.



ಧರ್ಮಶಾಲಾ ಹವಾಮಾನ ವರದಿ ಹಿಮಾಚಲ ಪ್ರದೇಶದ ನಗರವಾಗಿರುವ ಧರ್ಮಶಾಲಾ ಟಿ೨೦ ಸರಣಿಯ ಅಂತಿಮ ಎರಡು ಪಂದ್ಯಗಳು ಆಯೋಜನೆಯಾಗಲಿದ್ದು ಶನಿವಾರ ಹಾಗೂ ಭಾನುವಾರ ಈ ಪಂದ್ಯಗಳು ನಡೆಯಲಿದೆ. ಆದರೆ ಈಗಿನ ಹವಾಮಾನ ವರದಿಯ ಪ್ರಕಾರ ಶನಿವಾರ ನಡೆಯಲಿರುವ ಪಂದ್ಯಕ್ಕೆ ಹವಾಮಾನ ಅಡ್ಡಿಯಾಗುವ ಅತಂಕ ಇದೆ. ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇನ್ನು ಉಷ್ಣಾಂಶ ೧೦ ಡಿಗ್ರಿ ಸೆಲ್ಸಿಯಸ್ಗೆ ಕುಸಿಯುವ ಸಾಧ್ಯತೆಯಿದೆ.