ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಹಲವು ವ?ಗಳಿಂದ ಅಪೂರ್ಣಗೊಂಡು ನೆನೆಗುದಿಗೆ ಬಿದ್ದಿರುವ ಜಿಲ್ಲಾ ರಂಗಮಂದಿರ ಕಾಮಗಾರಿಯನ್ನು ಶೀಘ್ರವೇ ಆರಂಭಿಸಿ ಆಗಸ್ಟ್ ೧೫ರೊಳಗೆ ಪೂರ್ಣ ಗೊಳಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ರಂಗಮಂದಿರ, ಗ್ರಂಥಾಲಯ ಕಟ್ಟಡ ನಿರ್ಮಾಣ ಹಾಗೂ ಇನ್ನಿತರ ವಿ?ಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಲ ವ?ಗಳಿಂದ ಜಿಲ್ಲಾ ರಂಗಮಂದಿರ ಕಾಮಗಾರಿ ಅಪೂರ್ಣಗೊಂಡಿದೆ. ಜಿಲ್ಲಾ ರಂಗಮಂದಿರದ ಇತರೆ ಸೌಲಭ್ಯಗಳಿಗಾಗಿ ಹಣ ನಿಗದಿಯಾಗಿದೆ. ಇನ್ನು ವಿಳಂಬ ಮಾಡದೇ ಕಾಮಗಾರಿಯನ್ನು ಆರಂಭಿಸಿ ಅತೀ ಶೀಘ್ರವಾಗಿ ಪ್ರಗತಿಯಾಗಬೇಕು. ವಿಳಂಬ ಧೋರಣೆ ಅನುಸರಿಸದೇ ಕಾಮಗಾರಿ ನೆರವೇರಿಸಬೇಕೆಂದು ಜಿಲ್ಲಾ ಉಸ್ತವಾರಿ ಸಚಿವರು ಸೂಚನೆ ನಿಡಿದರು.
ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗಬಾರದು. ಕಾಮಗಾರಿ ನಿರ್ವಹಣೆಯನ್ನು ಖುದ್ದು ನಿಂತು ಅಧಿಕಾರಿಗಳು ಗಮನಿಸಬೇಕು. ಹಿರಿಯ ಅಧಿಕಾರಿಗಳು ಕಾಮಗಾರಿ ವೇಗವಾಗಿ ಆರಂಭವಾಗಲು ಎಲ್ಲಾ ತುರ್ತು ಕ್ರಮಗಳನ್ನು ವಹಿಸಬೇಕೆಂದು ಸಚಿವರು ನಿರ್ದೇಶನ ನೀಡಿದರು.
ಇದೇ ವೇಳೆ ನಗರದಲ್ಲಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ ಕಟ್ಟಡ ಕಾಮಗಾರಿ ಕುರಿತು ಪ್ರಗತಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಜನತೆಯ ಸೇವೆಗೆ ಬಳಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕಿದೆ. ಹೀಗಾಗಿ ಕಾಮಗಾರಿಯನ್ನು ಚುರುಕುಗೊಳಿಸಬೇಕು. ನಿಗದಿತ ಅವಧಿಯೊಳಗೆ ಕೆಲಸ ಪೂರ್ಣವಾಗಬೇಕು. ಗುಣಮಟ್ಟದಲ್ಲಿ ಯಾವುದೇ ಲೋಪಗಳು ಬರದಂತೆ ಉತ್ತಮವಾಗಿ ಕಾಮಗಾರಿ ಕೈಗೊಳ್ಳಬೇಕೆಂದು ಉಸ್ತುವಾರಿ ಸಚಿವರು ತಿಳಿಸಿದರು.
ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿ ಅಪೂರ್ಣವಾಗಿರುವ ಕೆಲಸಗಳನ್ನು ಕೈಗೊಳ್ಳುವ ಸಂಬಂಧ ಸೂಚನೆ ನೀಡಿದ ಉಸ್ತುವಾರಿ ಸಚಿವರು ಈ ನಿಟ್ಟಿನಲ್ಲಿ ವಹಿಸಬೇಕಿರುವ ಅಗತ್ಯ ಕ್ರಮಗಳಿಗೆ ಮುಂದಾಗಬೇಕು ಎಂದರು.
ಇದೇ ವೇಳೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಪರಿಹಾರ ಸಂಬಂಧ ಪ್ರಕರಣಗಳಿಗೆ ಅಗತ್ಯ ಕ್ರಮ ವಹಿಸಿ ಅಪೂರ್ಣವಾಗಿರುವ ಕೆಲಸವನ್ನು ತ್ವರಿತವಾಗಿ ನಿರ್ವಹಿಸಬೇಕಿದೆ ಎಂದರು.
ಚಾಮರಾಜನಗರ ನಗರಸಭೆಯ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಆಗುತ್ತಿರುವ ವಿಳಂಬದ ದೂರುಗಳ ಕುರಿತು ನಗರಸಭೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕರಿಗೆ ಸ್ಪಂದಿಸದ ಅಧಿಕಾರಿಗಳ ಕಾರ್ಯವೈಖರಿ ಬದಲಾಗಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನು ಬದಲಾಯಿಸಬೇಕಾಗುತ್ತದೆ. ಜನತೆಯ ಕೆಲಸಗಳಿಗೆ ನಗರಸಭೆಯಲ್ಲಿ ಆದ್ಯತೆ ನೀಡಬೇಕು .ಇನ್ನು ಮುಂದೆ ದೂರುಗಳು ಬಂದರೆ ಸಹಿಸಲಾಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಕೆ ನೀಡಿದರು.
ಶಾಸಕರಾದ ಸಿ.ಎಸ್. ನಿರಂಜನ್‌ಕುಮಾರ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿ?ಧಿಕಾರಿ ಕೆ.ಎಸ್. ಸುಂದರ್ ರಾಜ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆಂಪರಾಜು, ನಿರ್ಮಿತಿ ಕೇಂದ್ರದ ಅಧಿಕಾರಿ ಸುರೇಂದ್ರ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಕೆ. ಸುರೇಶ್, ನಗರಸಭೆ ಆಯುಕ್ತರಾದ ಕರಿಬಸವಯ್ಯ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿಕುಮಾರ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್. ಚೆನ್ನಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
