ಮಾರಕ ಕೊರೊನಾ ಸೋಂಕಿನ ಆತಂಕದ ನಡುವೆಯೂ ನಿಷ್ಠೆ ಮತ್ತು ನಿಸ್ವಾರ್ಥ ಭಾವನೆಯಿಂದ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕರನ್ನು ಎಲ್ಲರೂ ಗೌರವಿಸಬೇಕು’ ಎಂದು ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ಹೇಳಿದರು.

ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದದಾದಿಯರ ಜೊತೆ ಫ್ಲಾರೆನ್ಸ್‌ ನೈಟಿಂಗೆಲ್‌ ಅವರ ಜನ್ಮದಿನದಂದು ವಿಶ್ವ ದಾದಿಯರ ದಿನವನ್ನಾಗಿ ಆಚರಿಸಲಾಯಿತು ಮೇಣದ ಬತ್ತಿ ಹಿಡಿದು ಫ್ಲಾರೆನ್ಸ್‌ ನೈಟಿಂಗೆಲ್‌ ಸ್ಮರಿಸುತ್ತ ಆನಂತರ
ಹಲವು ವರ್ಷದಿಂದ ದಾದಿಯರಾಗಿ ಸೇವೆ ಸಲ್ಲಿಸಿದರಶ್ಮಿ, ರಶೀದ, ಕೋಮಲಾ, ಪೂರ್ಣಿಮಾ
ರವರಿಗೆ ಸನ್ಮಾನಿಸಿ ಶುಭಕೋರಿಮಾತನಾಡಿದ ಅವರುಪ್ರತಿಯೊಬ್ಬ ರೋಗಿಗೆ ಇನ್ನೊಬ್ಬ ತಾಯಿಯಂತೆ ಸೇವೆ ಸಲ್ಲಿಸುವ ನರ್ಸ್‌ಗಳು ಧನ್ಯರು.ಆರೋಗ್ಯ ಸೇವಾ ಕ್ಷೇತ್ರದಲ್ಲಿ ಪರಿಣಾಮಕಾರಿ ಯಾದ ಶುಶ್ರೂಷಾ ವಿಭಾಗಕ್ಕೆ ದಾದಿಯರದೇ ನೇತೃತ್ವ. ವೈದ್ಯರ ನಿರ್ದೇಶನವನ್ನು ಯಥಾವತ್ತಾಗಿ ಪಾಲಿಸಲು ದಾದಿಯರು ಸಹಕರಿಸುತ್ತಾರೆ. ವಿಶ್ವ ದಾದಿಯರ ದಿನಾಚರಣೆಯ ನಿಮಿತ್ತ ಶುಶ್ರೂಷಾ ಸೇವೆಯ ಬಗ್ಗೆ ಉಲ್ಲೇಖೀಸುವುದು ಔಚಿತ್ಯದಾಯಕ
ಅವರಿವರೆನ್ನದೆ ಎಲ್ಲರ ಆರೋಗ್ಯ ಕಾಪಾಡಲು ಹಗಲಿರುಳು ಶ್ರಮಿಸುವ ಔದಾರ್ಯ ದೊಡ್ಡದು’ ಎಂದರು.

ನಂತರ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್
ಒಬ್ಬ ನರ್ಸ್ ತಾನು ಆರೈಕೆ ಮಾಡೋ ರೋಗಿ ಯಾವ ಜಾತಿ, ಯಾವ ಧರ್ಮ, ಯಾವ ಪಕ್ಷ, ಯಾವ ಊರು ಎಂಬೆಲ್ಲಾ ವಿಚಾರದ ಬಗ್ಗೆ ನೋಡುವುದೇ ಇಲ್ಲ. ರೋಗಿ ಯಾರೇ ಇರಲಿ, ಅವರನ್ನು ಮಗುವಿನಂತೆ ಆರೈಕೆ ಮಾಡಿ ಹುಷಾರಾಗಿಸಿ, ಮನೆಗೆ ಕಳುಹಿಸೋದಷ್ಟೇ ಅವರ ಏಕೈಕ ಗುರಿ. ಎಂದು ಹೇಳಿದರು

ಇದೇ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್,ಮಹದೇವ್, ರಮೇಶ್ ರಾಮಪ್ಪ, ರವಿಚಂದ್ರ,
ಸುಜಾತ ಹಾಗೂ ಇನ್ನಿತರರು ಹಾಜರಿದ್ದರು