ಮೈಸೂರು ಜನವರಿ ಜಿಲ್ಲಾಡಳಿತದ ವತಿಯಿಂದ ಜನವರಿ 25 ರಂದು ಬೆಳಗ್ಗೆ 10 ಗಂಟೆಗೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ರಾಷ್ಟಿಯ ಮತದಾರರ ದಿನಾಚರಣೆ ಆಚರಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಜಿ. ಲಕ್ಷಿö್ಮಕಾಂತ್ ರೆಡ್ಡಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿದ ಅವರು ಕೋವಿಡ್ ನಿಯಮಗಳನ್ವಯ ರಾಷ್ಟಿçÃಯ ಮತದಾರರ ದಿನ ಆಚರಿಸಲಾಗುವುದು. ಅಂದು ಸಾಂಕೇತಿಕವಾಗಿ ಹೊಸದಾಗಿ ಸೇರ್ಪಡೆಗೊಂಡ ಯುವ ಮತದಾರರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದರು.
ಸಮಾರಂಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಮತ್ತಿತರ ಗಣ್ಯರನ್ನು ಆಹ್ವಾನಿಸಲಾಗುವುದು. ರಾಷ್ಟಿಯ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಪಾಲಿಕೆ ಉಪ ಆಯುಕ್ತರಾದ ಎಂ.ಕೆ. ಸವಿತಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರೇಮ್ ಕುಮಾರ್, ಜಿಲ್ಲಾಧಿಕಾರಿಗಳ ಕಚೇರಿ ಚುನಾವಣಾ ತಹಶೀಲ್ದಾರ್ ರಾಮಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್. ರಾಜು, ಮತ್ತಿತರು ಉಪಸ್ಥಿತರಿದ್ದರು.