ಜನವರಿ 17ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜನಸೇವಕ ಸಮಾವೇಶ ಜರುಗಲಿದ್ದು, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪೂರ್ವ ತಯಾರಿಯನ್ನು ಪರಿಶೀಲಿಸಿದರು. ಜಿಲ್ಲೆಯ ಬಿಜೆಪಿ ನಾಯಕರು ಮತ್ತು ಹಿರಿಯ ಪೋಲಿಸ್ ಅಧಿಕಾರಿಗಳು ಉಪಸ್ಥಿತರಿದ್ದರು.