ಚಾಮರಾಜನಗರ: ಹರದನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಅಮೃತ್ ಮಹೋತ್ಸವದ ಪ್ರಯುಕ್ತ ಹರದನಹಳ್ಳಿ ಶಾಲಾ ಮಕ್ಕಳಿಂದ ತೀರಂಗಾ ಜಾಥ ನಡೆಯಿತು.
ಪಂಚಾಯತಿ ಅಧ್ಯಕ್ಷರಾದ ಹೆಚ್ .ಯಶೋದಮ್ಮ ನಾರಾಯಣಸ್ವಾಮಿ ಜಾಥಾಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ೭೫ನೇ ಸ್ವಾತಂತ್ರ ವರ್ಷದ ಅಮೃತ ಮಹೋತ್ಸವದಂದು ಹರ್ ಘರ್ ತಿರಂಗ ಅಭಿಯಾನವು ದೇಶದ ಅಭಿವೃದ್ಧಿಯ ಬಗ್ಗೆ ಮಕ್ಕಳಲ್ಲಿ ಮತ್ತು ಯುವಕರಲ್ಲಿ ಜಾಗೃತಿ ಮತ್ತು ದೇಶಭಕ್ತಿ ಮೂಡಿಸುವ ಉದ್ದೇಶ ಹೊಂದಿದೆ. ಪ್ರತಿ ಮನೆ ಮೇಲೆ ತ್ರಿವರ್ಣ ಧ್ವಜ ಅಭಿಯಾನವು ದೇಶಭಕ್ತಿಯ ಜೊತೆಗೆ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸುವ ಸಂಕಲ್ಪ ಹೊಂದಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಇದ್ದರು.
