ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಆರೋಪಗಳ ಸುರಿಮಳೆ ಗೈಯ್ಯುತ್ತಿದ್ದಾರೆ. ಇದೀಗ
ಜಿಲ್ಲಾಧಿಕಾರಿ ಅಧಿಕೃತ ನಿವಾಸದಲ್ಲಿ ಈಜುಕೊಳ, ಜಿಮ್ ನಿರ್ಮಾಣ ಮಾಡಲಾಗಿರುವ ಬಗ್ಗೆ ಜೆಡಿಎಸ್ ಮುಖಂಡ ಕೆ.ವಿ. ಮಲ್ಲೇಶ್ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಲದರ್ಶಿನಿ ಅತಿಥಿ ಗೃಹ ಪಾರಂಪರಿಕ ಕಟ್ಟಡಗಳ ವ್ಯಾಪ್ತಿಗೆ ಸೇರಿದೆ. ಕೊರೋನಾ ಸಂಕಷ್ಟ ಕಾಲದಲ್ಲಿ ಈಜುಕೊಳ, ಜಿಮ್ ನಿರ್ಮಾಣದ ಅವಶ್ಯಕತೆ ಇತ್ತಾ ಎಂದು ಪ್ರಶ್ನಿಸಿರುವ ಅವರು, ಇದಕ್ಕೆ ಎಲ್ಲಿಂದ ಅನುದಾನ ತರಲಾಗಿದೆ? ಎಷ್ಟು ಅನುದಾನ ಬಳಸಿದ್ದೀರಾ? ಅಥವಾ ಬೇರೆ ಯಾರಾದ್ರೂ ಪ್ರಾಯೋಜಕರ ಸಹಾಯ ಪಡೆದಿದ್ದೀರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ.
ಕೊರೋನಾ ಕಾಲದಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆ ಕಾಲ ಕೆಲಸ ಮಾಡ್ತೇನೆ ಅಂತಾ ಹೇಳುವ ಜಿಲ್ಲಾಧಿಕಾರಿಗಳಿಗೆ ಇದರ ಅಗತ್ಯ ಇತ್ತಾ? ಜನಪರವಾಗಿ ಚಿಂತಿಸುವ ಯಾರಾದ್ರು ಡಿಸಿಗಳು ಇದಕ್ಕೆ ಮುಂದಾಗುತ್ತಿದ್ದರಾ? ಈ ಬಗ್ಗೆ ಮಾಹಿತಿ ನೀಡಲಿ ಇಲ್ಲಾಂದರೆ ಮಾಹಿತಿ ಹಕ್ಕು ಮೂಲಕ ಮಾಹಿತಿ ಬಯಸುವುದಾಗಿ ತಿಳಿಸಿದ್ದಾರೆ.