
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಘೋಷಣೆ ಮಾಡಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಚರ್ಚೆ ನಡೆಸಿದರು.
ಇಬ್ರಾಹಿಂ ಇನ್ನೂ ಅವರ ತೀರ್ಮಾನ ತೆಗೆದುಕೊಳ್ಳಬೇಕಿದೆ. ಏನೂ ಒತ್ತಡ ಹಾಕಿ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ. ಹಿಂದಿನ ಕೆಲವು ಘಟನೆಗಳನ್ನು ಇಬ್ರಾಹಿಂ ಮೆಲುಕು ಹಾಕಿದ್ದಾರೆ.ನೋವಿನಿಂದ ಹಿಂದಿನ ಘಟನೆಗಳನ್ನು ಇಬ್ರಾಹಿಂ.ಮನದಟ್ಟು ಮಾಡಿಕೊಂಡಿದ್ದಾರೆ.

ದೇವೇಗೌಡರಿಗೂ ಇಬ್ರಾಹಿಂ ಅವರಿಗೂ ಇರುವ ನಂಟು ಸಿದ್ದರಾಮಯ್ಯ ರಾಜಕೀಯಕ್ಕೆ ಬರುವ ಮುಂದಿನಿಂದಲೂ ಇದೆ.೧೯೭೨ ಗೌಡರ ಜೊತೆ ಇಬ್ರಾಹಿಂ ಆತ್ಮೀಯ ಸಂಬಂಧ ಇದೆ.ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳನ್ನ ಜನ ತಿರಸ್ಕಾರ ಮಾಡಲಿದ್ದಾರೆ.ಈ ಹಿನ್ನೆಲೆಯಲ್ಲಿ ಅವರು ಯಾವಾಗ ತೀರ್ಮಾನ ಮಾಡಿದ್ರೂ ತುಂಬು ಹೃದಯದ ಸ್ವಾಗತ” ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಎಂದು ಹೇಳಿದರು.