ಗುಂಡ್ಲುಪೇಟೆ; ಜಾತ್ಯಾತೀತ ಜನತಾ ದಳದ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ತಾಲೂಕು ಅಧ್ಯಕ್ಷರಾಗಿ ಹೆಗ್ಗಡಹಳ್ಳಿ ಗ್ರಾಮದ ಎಸ್.ನವೀನ್ ನೇಮಕಗೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ಮೇರೆಗೆ ಚಾಮರಾಜನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಆರ್.ಮಂಜುನಾಥ್ ನೇಮಿಸಿ ಆದೇಶ ಹೊರಡಿಸಿದ್ದು, ಕ್ಷೇತ್ರದಲ್ಲಿ ಪಕ್ಷ ಬಲ ಪಡಿಸುವಂತೆ ಆದೇಶಿಸಿದ್ದಾರೆ.
ನೂತನ ಅಧ್ಯಕ್ಷ ಎಸ್.ನವೀನ್ ಮಾತನಾಡಿ, ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಸ್ಫರ್ದಿಸಲು ಪಕ್ಷವನ್ನು ಸಜ್ಜುಗೊಳಿಸುತ್ತೇನೆ ಎಂದು ತಿಳಿಸಿದರು.
ಇವರ ಆಯ್ಕೆಯನ್ನು ಜನತಾ ದಳದ ತಾಲೂಕು ಮಾಜಿ ಅಧ್ಯಕ್ಷ ಹಿರೀಕಾಟಿ ಎಚ್.ಪಿ.ಕುಮಾರ್ ಸ್ವಾಗತಿಸಿದ್ದು, ನವೀನ್ ನೇಮಕಕ್ಕೆ ಕಾರಣರಾದ ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಮತ್ತು ಜಿಲ್ಲಾಧ್ಯಕ್ಷ ಎ.ಆರ್.ಮಂಜುನಾಥ್ ಅವರನ್ನು ಅಭಿನಂದಿಸಿದ್ದಾರೆ.
ವರದಿ: ಬಸವರಾಜು ಎಸ್.ಹಂಗಳ