ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾ ತಪಸ್ವಿ ರಾಜೇಶ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ. ಅಗಲಿದ ಹಿರಿಯ ಕಲಾ ಚೇತನದ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿ, ಖ್ಯಾತ ಪೋಷಕ ನಟ ಕಲಾ ತಪಸ್ವಿ ರಾಜೇಶ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಕನ್ನಡ ಚಿತ್ರರಂಗ ಮತ್ತೊಬ್ಬ ಉತ್ತಮ ಕಲಾವಿದನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ. ಅವರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಓಂ ಶಾಂತಿ ಅಂತಾ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕನ್ನಡದ ಹಿರಿಯ ನಟ ರಾಜೇಶ್ ಸಾವು ಅನಿರೀಕ್ಷಿತ ಅಷ್ಟೇ ಆಘಾತಕಾರಿ. ದೀರ್ಘಕಾಲದಿಂದ ನನ್ನ ಸ್ನೇಹಿತರಾಗಿದ್ದ ರಾಜೇಶ್ ಹುಟ್ಟು ಪ್ರತಿಭೆ ಮತ್ತು ಸ್ವಂತ ಪರಿಶ್ರಮದಿಂದ ಬೆಳೆದು ನಮ್ಮನ್ನೆಲ್ಲ ರಂಜಿಸಿದವರು. ಅವರ ಕುಟುಂಬದ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಅಗಲಿದ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಅಂತಾ ಹೇಳಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ರಾಜೇಶ್ ಅವರು ವಿಧಿವಶರಾದ ಸುದ್ದಿ ಅತೀವ ದುಃಖವನ್ನುಂಟುಮಾಡಿದೆ. ರಂಗಭೂಮಿ ಹಿನ್ನೆಲೆಯಿಂದ ಬೆಳ್ಳಿತೆರೆ ಪ್ರವೇಶಿಸಿದ್ದ ರಾಜೇಶ್ ಅವರ ನಿಧನದಿಂದ ಚಿತ್ರರಂಗ ಹಿರಿಯ ನಟನನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು, ಅವರು ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಅಂತಾ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.