ಬಾಗಲಕೋಟೆ: ?ಕನ್ನಡದ ಕಬೀರ? ಎಂದೇ ಹೆಸರಾಗಿದ್ದ, ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರಇಂದು(ಫೆ.೫) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ೮೧ ವರ್ಷ ವಯಸ್ಸಾಗಿತ್ತು. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಹಿಂದೂಮುಸ್ಲಿಂ ಭಾವೈಕ್ಯದ ಪ್ರವಚನಕಾರರಾಗಿ ಹೆಸರುವಾಸಿಯಾಗಿದ್ದ, ಇಬ್ರಾಹೀಂ ಸುತಾರರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ನಾನಾ ಪ್ರಶಸ್ತಿಗಳು ಹುಡುಕಿಕೊಂಡು ಬಂದಿದ್ದವು. ಮಹಾಲಿಂಗಪುರದಲ್ಲಿಯೇ ಬದುಕಿನ ಸಂಧ್ಯಾಕಾಲ ಕಳೆಯುತ್ತಿದ್ದ ಸುತಾರ ಅವರಿಗೆ ನಾಲ್ಕು ವರ್ಷಗಳ ಹಿಂದೆ (೨೦೧೮ರ ಎಪ್ರಿಲ್ ) ಕೇಂದ್ರ ಸರ್ಕಾರವು ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು.