ಮೈಸೂರು: ಹೆಣ್ಣು ಕರಡಿಯೊಂದರ ಮೃತದೇಹ ನಾಗರಹೊಳೆ ರಾಷ್ಟ್ರೀಯ ಉದ್ಯನವನದಲ್ಲಿ ಪತ್ತೆಯಾಗಿದ್ದು, ಸ್ವಾಭಾವಿಕವಾಗಿ ಸಾವನ್ನಪ್ಪಿರುವುದಾಗಿ ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ವೀರನಹೋಸಳ್ಳಿ ವನ್ಯಜೀವಿ ವಲಯದ ಚಾಮಳ್ಳಿ ಶಾಖೆಯ ಅರಣ್ಯಪ್ರದೇಶದಲ್ಲಿ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿದ್ದು, ಇದು ಅಂದಾಜು ೫ ರಿಂದ ೬ ವರ್ಷ ಪ್ರಾಯದ ಹೆಣ್ಣು ಕರಡಿಯಾಗಿದೆ.
ಕರಡಿಯ ಮೃತದೇಹ ಪತ್ತೆಯಾಗುತ್ತಿದ್ದಂತೆಯೇ ಸಿಬ್ಬಂದಿಗಳು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಉಪಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ನಿರ್ದೇಶಕರು ರಾಜೀವ್‌ಗಾಂಧಿ ರಾಷ್ಟ್ರೀಯ ಉದ್ಯಾನವನ ಹುಣಸೂರು ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವನ್ಯಜೀವಿ ಉಪ ವಿಭಾಗ ಹುಣಸೂರು ರವರ ಮಾರ್ಗದರ್ಶನದಲ್ಲಿ ಕರಡಿಯ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು. ಈ ವೇಳೆ ಇದು ಸ್ವಾಭಾವಿಕವಾಗಿ ಸಾವನಪ್ಪಿರುವುದರ ಬಗ್ಗೆ ಖಚಿತವಾಗಿದೆ ಬಳಿಕ ಅಂತ್ಯಕ್ರಿಯೆ ನಡೆಸಲಾಯಿತು.
ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ನಮನ ನಾರಾಯಣನಾಯಕ, ಪಶು ವೈದ್ಯಾಧಿಕಾರಿ ಡಾ. ಮುಜೀಬುರ್ ರೆಹಮಾನ್ ಹಾಗೂ ಸಿಬ್ಬಂದಿ ಇದ್ದರು.

By admin