ಬೆಂಗಳೂರು: ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನೆಚ್ಚಿನ ಅಭಿಮಾನಿಗಳ ಜೊತೆಗೆ ಕೆಲವು ಸಮಯ ಕಳೆದು ಫೋಟೋಗೆ ಪೋಸ್ ಕೊಟ್ಟಿದ್ದಾರೆ.


ಕೊರೊನಾದಿಂದ ಬಹಳ ದಿನಗಳಿಂದ ಸುದೀಪ್ ಅವರು ಅಭಿಮಾನಿಗಳನ್ನ ಭೇಟಿ ಮಾಡಿರಲಿಲ್ಲ. ಇಂದು ಬೆಳಗ್ಗೆ ಮನೆ ಬಳಿ ಸೇರಿದ್ದರು. ವಿಕೇಂಡ್ ಕಿಚ್ಚ ಅಭಿಮಾನಿಗಳ ಜೊತೆಗೆ ಕಾಲ ಕಳೆದಿದ್ದಾರೆ


ಜೆ.ಪಿ ನಗರದ ಸುದೀಪ್ ಮನೆ ಮುಂದೆ ಸೇರಿದ ಕಿಚ್ಚನ ಅಭಿಮಾನಿಗಳು ಸೇರಿದ್ದರು. ಈ ವೇಳೆ ಸುದೀಪ್ ಅವರು ಫೋಟೋ ಕ್ಲಿಕಿಸಿಕೊಂಡು ಆಟೋ ಗ್ರಾಫ್ ಕೊಟ್ಟಿದ್ದಾರೆ. ಸುಮಾರು ೧೧ ಗಂಟೆಗೆ ಮನೆಯಿಂದ ಹೊರಗೆ ಬಂದ ಕಿಚ್ಚ ಬಹಳ ಸಮಯ ಅಭಿಮಾನಿಗಳ ಜೊತೆ ಕಾಲ ಕಳೆದಿದ್ದಾರೆ. ಈ ಫೋಟೋ ಮತ್ತು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ನ ವಿಕ್ರಾಂತ್ ರೋಣ ಸಿನಿಮಾದ ಕೆಲಸ ಸಂಪೂರ್ಣ ಮುಗಿದಿದೆ. ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಕೋವಿಡ್ ಮತ್ತು ಸರ್ಕಾರದ ಕೆಲವು ನಿಯಮಗಳಿಂದಾಗಿ ಬಿಡುಗಡೆ ಎರಡೆರಡು ಬಾರಿ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಈ ಬಾರಿ ಪಕ್ಕಾ ದಿನಾಂಕವನ್ನು ಗೊತ್ತು ಮಾಡಿಕೊಂಡು ಅಖಾಡದಲ್ಲಿ ಸದ್ದು ಮಾಡಲಿದೆ ಚಿತ್ರತಂಡ