ಮಡಿಕೇರಿ : ಕೊಡಗಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಲಿದ್ದು ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡು ಬರುತ್ತಿದೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 472 ಹೊಸ ಪ್ರಕರಣಗಳು ದೃಢಪಟ್ಟಿದ್ದು 12 ಮಂದಿ ಸಾವನ್ನಪ್ಪಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 239 ಹೊಸ ಕೋವಿಡ್-19 ಪ್ರಕರಣಗಳು ಕಂಡುಬAದಿದೆ. ಈ ಪೈಕಿ 229 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 10 ಪ್ರಕರಣಗಳು ರಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 117 ಹೊಸ ಕೋವಿಡ್-19 ಪ್ರಕರಣಗಳು ಕಂಡುಬAದಿದೆ. ಈ ಪೈಕಿ 110 ಆರ್.ಟಿ.ಪಿ.ಸಿ.ಆರ್ ಮತ್ತು 7 ಪ್ರಕರಣಗಳು ರಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 116 ಹೊಸ ಕೋವಿಡ್-19 ಪ್ರಕರಣಗಳು ಕಂಡುಬAದಿದೆ. ಈ ಪೈಕಿ 100 ಆರ್.ಟಿ.ಪಿ.ಸಿ.ಆರ್ ಮತ್ತು 16 ಪ್ರಕರಣಗಳು ರಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 19,270 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 669 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 14,046 ಮಂದಿ ಗುಣಮುಖರಾಗಿದ್ದಾರೆ. 5011 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 12 ಸಾವು ಉಂಟಾಗಿದ್ದು, ಒಟ್ಟು 213 ಮರಣ ಪ್ರಕರಣಗಳು ವರದಿಯಾಗಿದೆ.
ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 480 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.