ಕೋವಿಡ್ ಲಸಿಕಾ ಕಾರ್ಯಕ್ರಮದ ಮೊದಲ ದಿನವಾದ ಶನಿವಾರ ದಿನಾಂಕ 16-01-2021 ರಂದು ಮೈಸೂರು ಜಿಲ್ಲೆಯಲ್ಲಿ 9 ಸ್ಥಳಗಳಲ್ಲಿ ನಡೆಯಲಿದೆ. ಅವುಗಳ ವಿವರ ಇಂತಿದೆ:-

1. ಮೈಸೂರಿನ ಎಂಎಂಸಿ & ಆರ್‌ಐ (ಪಿಕೆಟಿಬಿ ಆಸ್ಪತ್ರೆ ಆವರಣದ ಟ್ರಾಮ ಕೇರ್ ಸೆಂಟರ್),
2. ಜೆಎಸ್‌ಎಸ್ ಆಸ್ಪತ್ರೆ,
3. ತಿ.ನರಸೀಪುರ ತಾಲ್ಲೂಕು ಆಸ್ಪತ್ರೆ,
4. ಎಚ್.ಡಿ.ಕೋಟೆ ತಾಲ್ಲೂಕು ಆಸ್ಪತ್ರೆ,
5. ಹುಣಸೂರು ತಾಲ್ಲೂಕು ಆಸ್ಪತ್ರೆ,
6. ಕೆ.ಆರ್.ನಗರ ತಾಲ್ಲೂಕು ಆಸ್ಪತ್ರೆ,
7. ನಂಜನಗೂಡು ತಾಲ್ಲೂಕು ಆಸ್ಪತ್ರೆ,
8. ಪಿರಿಯಾಪಟ್ಟಣ ತಾಲ್ಲೂಕು ಆಸ್ಪತ್ರೆ,
9. ರಂಗಸಮುದ್ರ ಆರೋಗ್ಯ ಮತ್ತು ಕ್ಷೇಮ ಕೇಂದ್ರ

ಮೊದಲ ದಿನ ರಂಗಸಮುದ್ರ ಕೇಂದ್ರದಲ್ಲಿ 60ಜನರಿಗೆ ಹಾಗೂ ಇತರೆ 8 ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಾಗುವುದು. ಲಸಿಕೆ ಪಡೆದವರನ್ನು 30 ನಿಮಿಷಗಳ ಕಾಲ ಸ್ಥಳದಲ್ಲೇ ನಿಗಾ ವಹಿಸಲಾಗುತ್ತದೆ.

ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಬೆಳಗ್ಗೆ 10:30 ಗಂಟೆಗೆ ನವದೆಹಲಿಯಲ್ಲಿ ಈ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಪ್ರಧಾನಮಂತ್ರಿಯವರು ಚಾಲನೆ ನೀಡಿದ ನಂತರ ಇತರ ಕೇಂದ್ರಗಳಲ್ಲಿ ಲಸಿಕೆ ಹಾಕಲು ಆರಂಭಿಸಲಾಗುತ್ತದೆ.

ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಾರ್ವಜನಿಕರನ್ನು ಉದ್ದೇಶಿಸಿ ಸಂದೇಶ ನೀಡುವರು. ಅವರ ಸಂದೇಶ ವೀಕ್ಷಣೆಗೆ ಲಸಿಕಾ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿರುತ್ತದೆ.

ಲಸಿಕಾ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿರುತ್ತದೆ. ಲಸಿಕಾ ಕೊಠಡಿಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ನೀಡಬಾರದು ಎಂದು ಸರ್ಕಾರದಿಂದ ಸೂಚನೆ ನೀಡಲಾಗಿದೆ.

ಲಸಿಕಾ ಕೇಂದ್ರದ ಹೊರಗೆ ಮಾಹಿತಿ ಪಡೆದುಕೊಳ್ಳಬಹುದು. ಸಹಕರಿಸಲು ಕೋರಿದೆ.

By admin